ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳದ ಹೆಚ್ಚಳದ ಬೆನ್ನಲ್ಲೇ ಎಚ್ಚೆತ್ತಿರುವ ರಾಜ್ಯ ಸರ್ಕಾರವು ಇದೀಗ ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಹೊಸ ಪ್ಲಾನ್ ಮಾಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗುತ್ತಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ವಸೂಲಿ ಮಾಡಲಾಗುತ್ತಿದೆ. ಕಾನೂನು ಕೈಗೆತ್ತಿಕೊಳ್ಳಲು ನಿಮಗೆ ಅನುಮತಿ ಕೊಟ್ಟವರು ಯಾರು,? ಸಾಲ ವಸೂಲಿಗೆ ರೌಡಿಗಳನ್ನು ಇಟ್ಟುಕೊಂಡಿದ್ದೀರಾ? ಎಂದು ಗರಂ ಆಗಿದ್ದಾರೆ.
ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ. ಪಾಟೀಲ್. ಕಂದಾಯ ಸಚಿವ ಕೃಷ್ಣ ಬೈರೇಗೌಡ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಸೇರಿದಂತೆ ಹಲವರು ಭಾಗಿಯಾಗಿದ್ದರು.