ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಮುಂಭಾಗ “ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ” ಯ ನೂತನ 65 ಆಂಬ್ಯುಲೆನ್ಸ್‌ಗಳ ಲೋಕಾರ್ಪಣೆ ಮಾಡಿದ್ದಾರೆ.
ಇಂದು ವಿಧಾನಸೌಧದ ಪೂರ್ವದ್ವಾರ ಮೆಟ್ಟಿಲುಗಳ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಮುಖ್ಯಮಂತ್ರಿಗಳ ಆಪತ್ಕಾಲಾಯಾನ ಸೇವೆ ಆಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ್ದಾರೆ.
ರಸ್ತೆ ಅಪಘಾತದ ಗಾಯಾಳುಗಳಿಗೆ ಸುವರ್ಣ ಸಮಯಾವಧಿಯಲ್ಲಿ(Golden Hour) ಚಿಕಿತ್ಸೆಗೆ ನೆರವಾಗಲು ನೂತನ 65 ಆಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ. ಅಪಘಾತಗಳ ನಿಯಂತ್ರಣ ಹಾಗೂ ರಸ್ತೆ ಸುರಕ್ಷತಾ ಕ್ರಮಗಳಿಗಾಗಿ ಕರ್ನಾಟಕ ರಸ್ತೆ ಸುರಕ್ಷತಾ ಪ್ರಾಧಿಕಾರದ ನಿಧಿಯಿಂದ 2024- 25 ನೇ ಸಾಲಿನಲ್ಲಿ 45 ಕೋಟಿ ರೂ. ಅನುದಾನ ಒದಗಿಸಲಾಗಿದೆ.