ಬೆಂಗಳೂರು : ಇಂದು ಇಬ್ಬರು ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಕೆಂಪೇಗೌಡ ಏರ್ ಪೋರ್ಟ್ ನಿಂದ ಏರ್ ಇಂಡಿಯಾ ವಿಮಾನದ ಮೂಲಕ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ.
ಸಚಿವ ಭೈರತಿ ಸುರೇಶ್, ಸಚಿವ ಕೆಜೆ ಜಾರ್ಜ್ ಜೊತೆಗೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ಕುತೂಹಲ ಮೂಡಿಸಿದೆ.