ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ನಿನ್ನೆ ಹೈಕೋರ್ಟ್ ವಜಾ ಮಾಡಿದೆ.ಇದರ ಬೆನ್ನಲ್ಲೆ ಇಂದು ಜನಪ್ರತಿನಿಧಿಗಳ ಕೋರ್ಟ್ ಸಹ ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. ಹಾಗಾಗಿ ಈ ಒಂದು ಹಗರಣದಲ್ಲಿ ಸಿದ್ದರಾಮಯ್ಯ ನಾಳೆಯೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಸ್ಪೋಟಕ ಹೇಳಿಕೆ ನೀಡಿದರು.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಿವೈ ವಿಜಯೇಂದ್ರ,ಸಿಎಂ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಾಳೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ಮಾಡುತ್ತೇವೆ.ತಕ್ಷಣ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ಸಿಎಂ ರಾಜೀನಾಮೆಗೆ ಆಗ್ರಹಿಸಿ ನಾಳೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ಮಾಡುತ್ತೇವೆ. ಯಾವುದೇ ತನಿಖೆಗೆ ಸಿದ್ಧ ಎಂದು ಸಿಎಂ ಹೇಳಿದ್ದಾರೆ. ಈಗ ಸಿದ್ದರಾಮಯ್ಯ ತನಿಖೆಗೆ ಸಹಕಾರ ನೀಡಬೇಕು ಎಂದು ಹೇಳಿದ್ದಾರೆ.
ಭಂಡತನ ಬಿಟ್ಟು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯದ ಸಿಎಂ ಸಿದ್ದರಾಮಯ್ಯ ಇಂದು ಬೆತ್ತಲಾಗಿದ್ದಾರೆ. ಬಿಜೆಪಿ ಭ್ರಷ್ಟರ ಪಕ್ಷ, ನಾವು ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇ ಅಂತಾ ಹೇಳಿ ಅಧಿಕಾರಕ್ಕೆ ಬಂದರು. ಇದೀಗ ಲೋಕಾಯುಕ್ತ ಪೊಲೀಸರಿಂದ ನ್ಯಾಯಯುತ ತನಿಖೆ ಅಸಾಧ್ಯ. ಹೀಗಾಗಿ ಸಿಬಿಐನಿಂದಲೇ ತನಿಖೆ ಆಗಬೇಕು. ಸಿಬಿಐ ತನಿಖೆಗೆ ಆದೇಶ ಮಾಡಿದರೆ ಗೌರವ ಮತ್ತಷ್ಟು ಹೆಚ್ಚಾಗುತ್ತೆ ಎಂದಿದ್ದಾರೆ.