ಬೆಂಗಳೂರು : ಇಂದು ವಿಕ್ಟೊರಿಯ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧಿಡಿರ್ ಎಂದು ಭೇಟಿ ನೀಡಿದರು. ಬೆಂಗಳೂರಿನ ಕೆಆರ್ ಮಾರ್ಕೆಟ್ ರಸ್ತೆಯಲ್ಲಿರುವ ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಎಂದು ಭೇಟಿಯಾಗಿದ್ದಾರೆ. ಇದೆ ವೇಳೆ ಸಿಎಂ ಸಿದ್ದರಾಮಯ್ಯಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಸಾಥ್ ನೀಡಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಯ ಹೊರರೋಗಿಗಳ ವಿಭಾಗಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಹೊರ ರೋಗಿಗಳ ಸಮಸ್ಯೆಗಳನ್ನು ಸಿಎಂ ಸಿದ್ದರಾಮಯ್ಯ ಆಲಿಸಿದರು. ಇವಳೇ ಬಹಳ ರೋಗಿಯೊಬ್ಬರು ಅಳುತ್ತಲೇ ಸಿಎಂ ಸಿದ್ದರಾಮಯ್ಯ ಬಳಿ ತಮ್ಮ ಸಮಸ್ಯೆಗಳನ್ನು ಹೇಳಿ ಅಳಲು ತೋಡಿಕೊಂಡರು ಈ ವೇಳೆ ಸಿಎಂ ಗೆ ವೈದಿಕ ಶಿಕ್ಷಣ ಸಚಿವ ಶರಪ್ರಕಾಶ್ ಪಾಟೀಲ್ ಸೇರಿದಂತೆ ಹಲವು ಸಚಿವರು ಅಧಿಕಾರಿಗಳು ಸಾಥ್ ನೀಡಿದರು.