ನವದೆಹಲಿ : ಸಿಎಂ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು, ರಾಜ್ಯದ ಯೋಜನೆಗಳ ಕುರಿತು ಚರ್ಚೆ ನಡೆಸಿದ್ದಾರೆ.
ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರೈತರಿಗೆ ನೀಡುವ ನಬಾರ್ಡ್ ಸಾಲ ಪ್ರಮಾಣ ಹೆಚ್ಚಳ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ, ಮೇಕೆದಾಟು ಹಾಗೂ ಕಳಸಾ-ಬಂಡೂರಿ ಯೋಜನೆಗೆ ಅನುಮತಿ ನೀಡುವುದು, 16ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನ್ಯಾಯಯುತ ತೆರಿಗೆ ಪಾಲು ಹಂಚಿಕೆ ಮಾಡುವುದು ಸೇರಿದಂತೆ ರಾಜ್ಯದ ಹಿತಾಸಕ್ತಿಯ ಹಲವು ವಿಚಾರಗಳನ್ನು ಒಳಗೊಂಡ ಮನವಿ ಪತ್ರವನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.
ದೆಹಲಿಯಲ್ಲಿ ಇಂದು ಪ್ರಧಾನಿ @narendramodi ಅವರನ್ನು ಭೇಟಿಯಾಗಿ ರೈತರಿಗೆ ನೀಡುವ ನಬಾರ್ಡ್ ಸಾಲ ಪ್ರಮಾಣ ಹೆಚ್ಚಳ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ, ಮೇಕೆದಾಟು ಹಾಗೂ ಕಳಸಾ-ಬಂಡೂರಿ ಯೋಜನೆಗೆ ಅನುಮತಿ ನೀಡುವುದು, 16ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನ್ಯಾಯಯುತ ತೆರಿಗೆ ಪಾಲು ಹಂಚಿಕೆ ಮಾಡುವುದು ಸೇರಿದಂತೆ ರಾಜ್ಯದ ಹಿತಾಸಕ್ತಿಯ ಹಲವು… pic.twitter.com/hDMqOiL1sg
— Siddaramaiah (@siddaramaiah) November 29, 2024
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಬೇಟಿಯಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿಗಳು ಸಂಸತ್ ಭವನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ.