ಹಾವೇರಿ : ಆಪರೇಷನ್ ಕಮಲದ ಮೂಲಕ ಅಧಿಕಾರದಿಂದ ನನ್ನ ಇಳಿಸಲು ಯತ್ನಿಸಲಾಗುತ್ತಿದೆ. ಒಬ್ಬ ಶಾಸಕರಿಗೆ 50 ಕೋಟಿ ಆಫರ್ ನೀಡಿ ಆಪರೇಷನ್ ಕಮಲಕ್ಕೆ ಯತ್ನಿಸಲಾಗಿದೆ. ಈಗ ನಾನು ರಾಜೀನಾಮೆ ಕೊಡಬೇಕು ಎಂದು ಅಂತಿದ್ದಾರೆ. ಆದರೆ ನಾನು ಯಾವುದೇ ತಪ್ಪು ಮಾಡಿಲ್ಲ ಹಾಗಾಗಿ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಅಂತ ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬಳ್ಳಾರಿ ಜಿಲ್ಲೆಯ ಸಮಣೂರು ತಾಲೂಕಿನ ಹುರಳಿಕುಪ್ಪಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಭಾಷಣ ಮಾಡಿದ ಅವರು, ಎಲ್ಲರೂ ಸೇರಿ ನನ್ನ ವಿರುದ್ಧ ಹುನ್ನಾರ ಮಾಡಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಗ ಭರತ್ ಬೊಮ್ಮಾಯಿನನ್ನು ಸೋಲಿಸಿ ಉತ್ತರ ಕೊಡಿ. ನನ್ನ ವಿರುದ್ಧ ನಡೆಯುತ್ತಿರುವ ಹುನ್ನಾರಕ್ಕೆ ಉತ್ತರ ಕೊಡಬೇಕಿದೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ.ಹೊಟ್ಟೆ ಕಿಚ್ಚಿನಿಂದ ಸಹಿಸದೆ ಹೇಗಾದರೂ ಮಾಡಿ ನನ್ನನ್ನು ಇಳಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.
ಆಪರೇಷನ್ ಕಮಲದ ಮೂಲಕ ಅಧಿಕಾರದಿಂದ ನನ್ನ ಇಳಿಸಲು ಯತ್ನಿಸಲಾಗುತ್ತಿದೆ. ಒಬ್ಬ ಶಾಸಕರಿಗೆ 50 ಕೋಟಿ ಆಫರ್ ನೀಡಿ ಆಪರೇಷನ್ ಕಮಲಕ್ಕೆ ಯತ್ನಿಸಲಾಗಿದೆ. ಈಗ ನಾನು ರಾಜೀನಾಮೆ ಕೊಡಬೇಕು ಎಂದು ಅಂತಿದ್ದಾರೆ. ಕಾನೂನಿನಡಿ ಎದುರಿಸಲು ಸಿದ್ಧನಿದ್ದೇನೆ ಎಂದು ಹೇಳಿದ್ದೇನೆ ಆದರೂ ನನ್ನ ವಿರುದ್ಧ ಮಸಲತ್ತು ಮಾಡ್ತಾನೆ ಇದ್ದಾರೆ. ಹೇಗಾದರೂ ಮಾಡಿ ನನ್ನನ್ನು ಅಧಿಕಾರದಿಂದ ಕೆಳಗಿಳಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಬಿಗ್ ಶಾಕ್ ನೀಡಿದ್ದು, ಇಂದು ಲೋಕಾಯುಕ್ತ ಅಧಿಕಾರಿಗಳು ನವೆಂಬರ್ 6 ರಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು ನಾನು ಲೋಕಾಯುಕ್ತ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಇದೇ ವೇಳೆ ತಿಳಿಸಿದರು.