ಬೆಂಗಳೂರು : ಪಹಲ್ಗಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಬೆಂಗಳೂರಿನ ನಿವಾಸಿ ಭರತ್ ಭೂಷಣ್ ಅವರ ಅಂತಿಮ ವಿಧಿವಿಧಾನಗಳನ್ನು ಇಂದು ನಡೆಸಲಾಗುತ್ತಿದೆ. ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಭರತ್ ಭೂಷಣ್ ಅವರ ಅಂತಿಮ ದರ್ಶನ ಪಡೆಯುತ್ತಿರುವ, ಭರತ್ ನಿವಾಸದ ಸುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಭರತ್ ಮೃತದೇಹದ ಮುಂದೆ ತಂದೆ, ತಾಯಿಯ ಆಕ್ರಂದನ ಮುಗಿಲು ಮುಟ್ಟಿದ್ದು, ಮತ್ತಿಕೆರೆಯ ಸುಂದರನಗರದಲ್ಲಿ ಭರತ್ ಅಂತಿಮ ದರ್ಶನವನ್ನು ಸಂಬಂಧಿಕರು ಪಡೆಯುತ್ತಿದ್ದಾರೆ.