ಚಾಮರಾಜನಗರ : ನಿನ್ನೆ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಶಾಸಕ ಎಸ್ ಜಯಣ್ಣ ಅವರು ಕೂಡ ಹೃದಯಘಾತದಿಂದ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ತೆರಳಿ ಜಯಣ್ಣ ಅವರ ಅಂತಿಮ ದರ್ಶನ ಪಡೆದರು.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಕ್ಷೇತ್ರದ ಮಾಜಿ ಶಾಸಕ ಎಸ್ ಜಯಣ್ಣನಿನ್ನೆ ನಿಧನರಾಗಿದ್ದಾರೆ.ಹಾಗಾಗಿ ಇಂದು ಸಿಎಂ ಸಿದ್ದರಾಮಯ್ಯ ಮಾಜಿ ಶಾಸಕ ಎಸ್ ಜಯಣ್ಣ ಅವರ ಅಂತಿಮ ದರ್ಶನ ಪಡೆದರು. ಕೊಳ್ಳೇಗಾಲದ ಮಹದೇಶ್ವರ ಬಡಾವಣೆಯಲ್ಲಿರುವ ಜಯಣ್ಣ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಈ ವೇಳೆ ಆಪ್ತ ಹಾಗೂ ಗೆಳೆಯನನ್ನು ನೋಡಿ ಸಿಎಂ ಸಿದ್ದರಾಮಯ್ಯ ಭಾವುಕರಾದರು.








