ಬೆಳಗಾವಿ : ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮರಾದ ಯೋಧರುಗಳಾದ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಗಳಿಗೆ ಸಿಎಂ ಸಿದ್ದರಾಮಯ್ಯ ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದ್ದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ. ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮರಾದ ಯೋಧರುಗಳಾದ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಗಳಿಗೆ ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದೆ.
ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ… pic.twitter.com/erterWW6Gu
— Siddaramaiah (@siddaramaiah) December 26, 2024