ಮಂಗಳೂರು : ಸಿಎಂ ಸಿದ್ದರಾಮಯ್ಯ ಮಂಗಳೂರು ಪ್ರವಾಸ ಕೈಗೊಂಡಿದ್ದು, ಮಂಗಳೂರಿನ ಉರ್ವದಲ್ಲಿ ನೂತನವಾಗಿ ನಿರ್ಮಿಸಿರುವ ಕಬಡ್ಡಿ ಹಾಗೂ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣವನ್ನು ಶುಕ್ರವಾರ ಬ್ಯಾಡ್ಮಿಂಟನ್ ಆಡುವ ಮೂಲಕ ಉದ್ಘಾಟಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮಂಗಳೂರಿನ ಉರ್ವದಲ್ಲಿ ನೂತನವಾಗಿ ನಿರ್ಮಿಸಿರುವ ಕಬಡ್ಡಿ ಹಾಗೂ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣವನ್ನು ಶುಕ್ರವಾರ ಬ್ಯಾಡ್ಮಿಂಟನ್ ಆಡುವ ಮೂಲಕ ಉದ್ಘಾಟಿಸಿದೆ.ಕರಾವಳಿ ಭಾಗದ ಯುವಜನರು ಕ್ರೀಡಾಕ್ಷೇತ್ರದಲ್ಲಿ ಹೆಚ್ಚು ತೊಡಗಿಸಿಕೊಂಡು, ರಾಷ್ಟ್ರೀಯ – ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಈ ಕ್ರೀಡಾಂಗಣ ನೆರವಾಗಲಿದೆ ಎನ್ನುವ ನಂಬಿಕೆ ನನ್ನದು ಎಂದು ತಿಳಿಸಿದ್ದಾರೆ.