ಬೆಂಗಳೂರು : ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಸಮಿತಿಯ ಮಧ್ಯಂತರ ವರದಿಯನ್ನು ಇಂದು ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದಾರೆ.
ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಸೂಕ್ತ ಶಿಫಾರಸುಗಳೊಂದಿಗೆ ವರದಿ ಸಲ್ಲಿಸಲು ರಾಜ್ಯ ಸರ್ಕಾರದ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗವನ್ನು ನವೆಂಬರ್ ತಿಂಗಳಿನಲ್ಲಿಯೇ ರಚಿಸಲಾಗಿದೆ. ಡಿಸೆಂಬರ್ ಮೊದಲ ವಾರದಲ್ಲಿ ಆಯೋಗಕ್ಕೆ ಹೊಣೆ ನಿಗದಿಪಡಿಸಲಾಗಿತ್ತು. ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶ ಮತ್ತು 2011ರ ಜನಗಣತಿ ಆಧಾರದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ವೈಜ್ಞಾನಿಕ ಮತ್ತು ತರ್ಕಬದ್ದ ಒಳ ಮೀಸಲಾತಿ ನೀಡುವ ಕುರಿತು ಪರಿಶೀಲಿಸಿ ಆಯೋಗ ವರದಿ ನೀಡಿದೆ.
ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಸಮಿತಿಯ ಮಧ್ಯಂತರ ವರದಿಯನ್ನು ಸ್ವೀಕರಿಸಿದೆ. pic.twitter.com/5qSbFTlW8x
— Siddaramaiah (@siddaramaiah) March 27, 2025