ಬೆಂಗಳೂರು : ಮಂಡಿನೋವು ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಸಿದ್ದರಾಮಯ್ಯ ಚಿಕಿತ್ಸೆ ಬಳಿಕ ಇದೀಗ ಚೇತರಿಸಿಕೊಂಡಿದ್ದಾರೆ.
ಇಷ್ಟು ದಿನ ಕಾವೇರಿ ನಿವಾಸದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಇಂದು ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಇಂದು ನಡೆಯುವ ಹೂಡಿಕೆದಾರರ ಸಮಾವೇಶದಲ್ಲಿ ಭಾಗಿಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಕೆಲ ದಿನಗಳ ಹಿಂದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಸಿದ್ದರಾಮಯ್ಯ ಅವರ ತಪಾಸಣೆ ನಡೆಸಿದ ವೈದ್ಯರು, ಸಿಎಂ ಸಿದ್ದರಾಮಯ್ಯಗೆ ಈ ಹಿಂದೆ ಲೆಗಮೆಂಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಇದೀಗ ಅದೇ ಜಾಗದಲ್ಲಿ ಒತ್ತಡ ಬಿದ್ದಿರುವುದರಿಂದ ನೋವು ಹೆಚ್ಚಾಗಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ. ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆ ನೀಡಿದ್ದರು. ಹೀಗಾಗಿ ಇಷ್ಟು ದಿನ ವಿಶ್ರಾಂತಿ ಪಡೆದ ನಂತರ ಇಂದು ಸಿಎಂ ಸಿದ್ದರಾಮಯ್ಯ ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.