ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದರು. ಸಭೆಯ ಬಳಿಕ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ಅಪರಾಧ ತಡೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುತ್ತದೆ ಎಂದು ಮೈಸೂರಿನಲ್ಲಿ ಪ್ರಾಧಿಕಾರದ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿ, ಅದೇ ರೀತಿ ಭಕ್ತಾದಿಗಳಿಗೆ ಸೌಲಭ್ಯ ಗಳಿಸಲು ಪ್ರಾಧಿಕಾರವನ್ನು ರಚನೆ ಮಾಡಲಾಗಿದೆ.ದಸರಾ ಸಂದರ್ಭದಲ್ಲಿ ವಿವಿಧ ಭಾಗದಿಂದ ಜನರು ಬರುತ್ತಾರೆ. ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಸೌಲಭ್ಯ ಒದಗಿಸಬೇಕಿದೆ ಎಂದರು.
ಅಲ್ಲದೆ ಚಾಮುಂಡಿ ಬೆಟ್ಟದಲ್ಲಿ ಸ್ವಚ್ಛತೆ ಬಗ್ಗೆ ಗಮನ ಹರಿಸಬೇಕೆಂದು ಸೂಚಿಸಲಾಗಿದೆ. ಚಾಮುಂಡಿ ಬೆಟ್ಟ ಅಷ್ಟೇ ಅಲ್ಲ ಎಲ್ಲಾ ದೇಗುಲಗಳಲ್ಲೂ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಸುರಕ್ಷತೆ ಇರಬೇಕೆಂದು ಸಿಸಿಟಿವಿಯನ್ನು ಅಳವಡಿಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಅಪರಾಧ ತಡೆಗಟ್ಟಲು ಟಾಸ್ಕ್ ಫೋರ್ಸ್ ರಚನೆ ಮಾಡುತ್ತೇವೆ. ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿದ್ದೇವೆ. ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ. ಚಾಮುಂಡಿ ಬೆಟ್ಟದಲ್ಲಿ ಧೂಮಪಾನ, ಮಧ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಚಾಮುಂಡಿ ದರ್ಶನದ ವೇಳೆ ಮೊಬೈಲ್ ನಿಷೇಧ ಮಾಡಲಾಗಿದೆ ಎಂದು ಅವರು ತಿಳಿಸಿದರು.