ಧಾರವಾಡ : ಬಿಜೆಪಿ ಆಪರೇಷನ್ ಕಮಲ ಮಾಡಲು ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ನೀಡಿದೆ ಎಂದು ಶಾಸಕ ಗಣಿಗ ರವಿ ಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಇದೀಗ ಹೊಸ ಬಾಂಬ್ ಸಿಡಿಸಿದ್ದು, ಈ ಹಿಂದೆ ಬಿಜೆಪಿ ಸರ್ಕಾರ ರಚನೆಗೆ ಕಾಂಗ್ರೆಸ್ಸಿನ ಶಾಸಕರನ್ನು ಕಳುಹಿಸಿದ್ದೇ ಸಿಎಂ ಸಿದ್ದರಾಮಯ್ಯನವರು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಚನೆಗೆ ಕೆಲ ಶಾಸಕರನ್ನೇ ಸಿದ್ದರಾಮಯ್ಯನವರೇ ಕಳುಹಿಸಿದ್ದರು. ಕಳೆದ ಬಾರಿ ಬಿಜೆಪಿ ಸರ್ಕಾರ ರಚನೆ ಮಾಡೋವಾಗ ಶಾಸಕರನ್ನು ಕಳುಹಿಸಿದ್ದೆ ಕಾಂಗ್ರೆಸ್.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ ಮುಂದುವರೆಯಬಾರದು ಎನ್ನುವ ಕಾರಣಕ್ಕೆ ಸಿದ್ದರಾಮಯ್ಯನವರೇ ಕೆಲ ಶಾಸಕರನ್ನು ಕಳುಹಿಸಿದ್ದರು. ಹೀಗಾಗಿ ನಾವು ಸರ್ಕಾರ ರಚನೆ ಮಾಡಿದ್ದೆವು. ಈ ಬಾರಿ ಅವರಿಗೆ ಬಹುಮತ ಇದೆ. ನಾವು ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
100 ಕೋಟಿ ಅಲ್ಲ, 500 ಕೋಟಿ ಬಗ್ಗೆ ಮಾತಾಡಲಿ. ದಾಖಲೆ ಇದ್ದರೆ ಕೊಡಿ ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತೆ. ಬರೀ ಸುಳ್ಳು ಆರೋಪ ಮಾಡುತ್ತಿದ್ದಾರೆ. ಬಿಜೆಪಿ 100 ಕೋಟಿ ನೀಡಿದ ಆಫರ್ ಬಗ್ಗೆ ದಾಖಲೆ ಇದ್ದರೆ ರವಿ ಗಾಣಿಗ ದಾಖಲೆ ಬಿಡುಗಡೆ ಮಾಡಲಿ. ವಿಷಯನ್ನು ಬೇರೆ ಕಡೆಗೆ ತಿರುಗಿಸಲು ಸುಮ್ಮನೆ ಮಾತನಾಡುತ್ತಿದ್ದಾರೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಸಿಕ್ಕಿ ಹಾಕಿಕೊಂಡಿದ್ದಾರೆ. ಹೀಗಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.