ಉತ್ತರಕನ್ನಡ : ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಪ್ಪೆ ಚಿಪ್ಪಿನ ಆಸೆಗೆ ನದಿಗೆ ಇಳಿದ ಒಂದೇ ಕುಟುಂಬದ 8 ಜನರು ಸಾವನಪ್ಪಿರುವ ಘಟನೆ ಇಂದು ನಡೆದಿದ್ದು, ಈ ಒಂದು ಘಟನೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರ ನೀಡಲಾಗುತ್ತೆ ಎಂದು ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡ ಅವರು, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು.
ಇನ್ನೂ ಕೆಲವರು ಈ ದುರ್ಘಟನೆಯಲ್ಲಿ ಕಾಣೆಯಾಗಿರುವ ಮಾಹಿತಿಯಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಕಾಣೆಯಾದವರು ಬದುಕಿಬಂದು ತಮ್ಮವರನ್ನು ಕೂಡಿಕೊಳ್ಳಲಿ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸೋಣ ಎಂದು ಸಂತಾಪ ಸೂಚಿಸಿದರು.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ…
— Siddaramaiah (@siddaramaiah) May 24, 2026








