ಬೆಂಗಳೂರು: ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆ ನಡೆದಿದ್ದು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ವಿಚಾರದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ತಾರತಮ್ಯ ಮಾಡುತ್ತಿದ್ದಾರೆಂಬ ವಿಷಯ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಮುಡಾ ಪ್ರಕರಣದಲ್ಲಿ ಯಾವುದೇ ತನಿಖಾ ವರದಿ ಇಲ್ಲದಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.
ಬಿಜೆಪಿ-ಜೆಡಿಎಸ್ನ ನಾಯಕರ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯಗೆ ಮಾತ್ರ ನೀಡಿದ್ದಾರೆ ಎಂಬುದು ಈ ಆಕ್ರೋಶಕ್ಕೆ ಕಾರಣ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟದಲ್ಲೂ ಇಂತಹುದೇ ನಿರ್ಣಯ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯುವ ಸಂಭವವಿದೆ ಎನ್ನಲಾಗಿದೆ.
ಈಗಾಗಲೇ ಸಚಿವ ಸಂಪುಟ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬೆಂಬಲ ವ್ಯಕ್ತಪಡಿಸಿದೆ. ಜತೆಗೆ ಅಭಿ ಯೋಜನೆಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಗೆ ಖಂಡನೆ ಯನ್ನೂ ವ್ಯಕ್ತಪಡಿಸಿದೆ. ಇಂದಿನ ಸಚಿವ ಸಂಪುಟ ಸಭೆಯಲ್ಲೂ ಸಿಎಂ ಪರ ಸರ್ವಾನುಮತದ ನಿರ್ಣಯ ಅಂಗೀಕರಿಸಿ ರಾಜ್ಯಪಾಲರ ನಡೆಯನ್ನು ಖಂಡಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.