ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಹೈ ಕೋರ್ಟ್ ವಿಭಾಗೀಯ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದನು ಪ್ರಶ್ನಿಸಿ, ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆಯನ್ನು ಹೈಕೋರ್ಟ್ ಜನವರಿ 25 ಕ್ಕೆ ಮುಂದೂಡಿ ಆದೇಶಿಸಿದೆ. ಇದರ ಮಧ್ಯ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದೆ.
ಈ ಒಂದು ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಕುರಿತು ಚರ್ಚಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಪ್ರಮುಖ ನಿರ್ಧಾರಗಳನ್ನು ಕೂಡ ಈ ಒಂದು ಸಭೆಯಲ್ಲಿ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಲ್ಲದೆ ಪ್ರಮುಖವಾಗಿ ಮುಡಾ ವಿಚಾರದಲ್ಲಿ ಇಡಿ ಇಂದ ಲೋಕಾಯುಕ್ತಕ್ಕೆ ಪತ್ರ ವ್ಯವಹಾರ ಮಾಡಿರುವ ಕುರಿತಾಗಿ ಅನೌಪಚಾರಿಕ ಚರ್ಚೆ ಮಾಡಲಾಗುತ್ತದೆ ಎನ್ನಲಾಗುತ್ತಿದೆ. ಅಲ್ಲದೆ ಇಡಿ ವಿರುದ್ಧ ಮುಂದಿನ ಕಾನೂನು ಹೋರಾಟದ ಕುರಿತು ಕೂಡ ಚರ್ಚೆ ಸಾಧ್ಯತೆ ಇದೆ ಎನ್ನಲಾಗಿದೆ.
ಅಲ್ಲದೆ ಇನ್ನೂ ಕೆಲವೇ ದಿನಗಳಲ್ಲಿ ಬೆಳಕಾವಿಯಲ್ಲಿ ಅಧಿವೇಶನ ಕೂಡ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ವಿಪಕ್ಷಗಳು ಸರ್ಕಾರದ ವಿರುದ್ಧ ಹೋರಾಟ ಮಾಡಲು ಏನೆಲ್ಲ ಅಸ್ತ್ರಗಳನ್ನು ಉಪಯೋಗಿಸಲು ನಿರ್ಧರಿಸಿವೇಯೋ, ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಇಂದಿನ ಸಂಪುಟ ಸಭೆಯಲ್ಲಿ ಪ್ರಮುಖವಾದಂತಹ ವಿಷಯಗಳ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.