ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ಇಂದು SIT ತನಿಖೆಗೆ ನೀಡುವ ಸಾಧ್ಯತೆಯಿದ್ದು, ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ.
ಕೆಫೆಯಲ್ಲಿ ‘ಬಾಂಬ್ ಬ್ಲಾಸ್ಟ್’ ಪ್ರಕರಣ : ಬರೋಬ್ಬರಿ 3 ತಿಂಗಳಿನಿಂದ ತಯ್ಯಾರಿ ಮಾಡಿಕೊಂಡಿದ್ದ ಆರೋಪಿ!
ಇಂದು ಮಧ್ಯಾಹ್ನ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಉನ್ನತ ಮಟ್ಟದ ಸಭೆ ನಡೆಸಲಿದ್ದು, ಸಭೆ ಬಳಿಕ ಪ್ರಕರಣವನ್ನು ಎಸ್ ಐಟಿಗೆ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಸಭೆಯಲ್ಲಿ ಬೆಂಗಳೂರು ಮಹಾನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಐಜಿ ಅಲೋಕ್ ಕುಮಾರ್ ಸೇರಿದಂತೆ ಎಲ್ಲಾ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಬೆಂಗಳೂರಿನ ಕೊಳವೆಬಾವಿಯಿಂದ ನೀರು ಪೂರೈಸುವ ಟ್ಯಾಂಕರ್ ಗಳು ಸರ್ಕಾರದ ಸುಪರ್ದಿಗೆ: ಡಿಸಿಎಂ ಡಿ.ಕೆ. ಶಿವಕುಮಾರ್
ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಗಾಯಗೊಂಡವರು ನಗರದ ಬ್ರೂಕ್ ಫೀಲ್ಡ್ ಆಸ್ಪತ್ರೆಗೆ ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ನಗರದ ಬ್ರೂಕ್ ಫೀಲ್ಡ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ನಂತರ ವೈದೇಹಿ ಆಸ್ಪತ್ರೆಗೆ ಕೂಡ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
BREAKING:ಭಾರತ ಅಧಿಕೃತವಾಗಿ ‘ತೀವ್ರ ಬಡತನ’ ನಿರ್ಮೂಲನೆ ಮಾಡಿದೆ: ಯುಎಸ್ ವರದಿ