ಬೆಂಗಳೂರು : ಚೀನಾದಲ್ಲಿ ಹುಟ್ಟಿಕೊಂಡಿರುವ HMPV ವೈರಸ್ ಸದ್ಯ ಭಾರತಕ್ಕೂ ಕಾಲಿಟ್ಟಿದ್ದು, ನಿನ್ನೆಯಿಂದ ಒಟ್ಟು ಭಾರತದಲ್ಲಿ ಕರ್ನಾಟಕ ಸೇರಿದಂತೆ ಇದುವರೆಗೂ 7 ಪ್ರಕರಣಗಳು ಪತ್ತೆಯಾಗಿವೆ.ಇದರ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಈ ಒಂದು ಸಭೆ ನಡೆಯಲಿದ್ದು, HMPV ಬಗ್ಗೆ ಈಗಾಗಲೇ ಆರೋಗ್ಯ ಅಧಿಕಾರಿಗಳು ವರದಿ ತಯಾರಿಸಿದ್ದು ಆರೋಗ್ಯ ಇಲಾಖೆಯಲ್ಲಿ ವರದಿ ಸಿದ್ದವಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಅಧಿಕಾರಿಗಳು ಈ ಒಂದು ವರದಿ ಸಲ್ಲಿಸಲಿದ್ದಾರೆ.ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಎಂಪಿವಿ ಬಗ್ಗೆ ಸಂಪೂರ್ಣ ವರದಿಯನ್ನು ಕೇಳಿದ್ದಾರೆ. ಸಂಪೂರ್ಣ ವರದಿಯೊಂದಿಗೆ ಸಭೆಗೆ ಬರಲು ಸಿಎಂ ಸಿದ್ದರಾಮಯ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಿಕ ಇಲಾಖೆಯ ಅಧಿಕಾರಿಗಳಿಗೆ ಕೆಲವು ಸಲಹೆ ಮತ್ತು ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿದ್ದು, ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಏನೆಲ್ಲಾ ಅಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.