ಕಲಬುರಗಿ : ಜಾತಿಗಣತಿ ಬಗ್ಗೆ ನಾಳೆ ವಿಧಾನಸೌಧದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ಕರೆಯಲಾಗಿದೆ. ನಾಳೆ ನಡೆಯಲಿರುವ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವರದಿ ವಿಚಾರವಾಗಿ ನಾಳೆ ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ. ನಿಜವಾಗಿಯೂ ಅದು ಜಾತಿ ಗಣತಿಯೇ ಅಲ್ಲ. ಅದು ಸಾಮಾಜಿಕ, ಆರ್ಥಿಕ ಸಮೀಕ್ಷೆ ಅಷ್ಟೇ, ನಾಳೆ ನಡೆಯಲಿರುವ ಸಭೆಯಲ್ಲಿ ಸಚಿವರ ಅಭಿಪ್ರಾಯ ಸಂಗ್ರಹಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಜಾತಿಗಣತಿ ವರದಿ ಬಗ್ಗೆ ವಿವಿಧ ಸಮುದಾಯಗಳ ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆ ಮಹತ್ವ ಪಡೆದುಕೊಂಡಿದ್ದು, ನಾಳಿನ ಸಭೆಯಲ್ಲಿ ಜಾತಿಗಣತಿ ವರದಿ ಕುರಿತ ನಿರ್ಧಾರ ಮಹತ್ವ ಪಡೆದುಕೊಂಡಿದೆ.