ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಜಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವಾಗಿ ಸಿದ್ದರಾಮಯ್ಯ ಅವರು ನಾಳೆ ಸೋಮವಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಈ ಕುರಿತಂತೆ ಸಿಎಂ ಸಿದ್ದರಾಮಯ್ಯ ವಕೀಲರು ಹಾಗೂ ಆಪ್ತರ ಜೊತೆ ಸಮಾಲೋಚನೆ ನಡೆಸಿದ್ದು, ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ನೇತೃತ್ವದಲ್ಲಿ ಈ ಒಂದು ಸಮಾಲೋಚನೆ ಸಭೆ ನಡೆದಿದ್ದು ಸಭೆಯಲ್ಲಿ ಹೈಕೋರ್ಟ್ ಮೆಟ್ಟಿಲೆರುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ. ಸಿದ್ದರಾಮಯ್ಯ ಅವರಿಗೆ ಪ್ರಾಜಿಕ್ಯೂಷನ್ ಗೆ ಅನುಮತಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಹಾಗಾಗಿ ನಾಳೆ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದು, ಇಂದು ವಕೀಲರಾದ ಅಭಿಷೇಕ್ ಮನು ಸಿಂಫ್ವಿ ಹಾಗೂ ಕಪಿಲ್ ಸಿಬಲ್ ಬೆಂಗಳೂರಿಗೆ ಆಗಮಿಸಿದ್ದಾರೆ.
ಹಾಗಾಗಿ ಸಿಎಂ ಪರ ಅಭಿಷೇಕ್ ಮನು ಸಿಂಫ್ವಿ ಹಾಗೂ ಕಪಿಲ್ ಸಿಬಲ್ ಅರ್ಜಿ ಸಲ್ಲಿಸಲಿದ್ದಾರೆ. ಹಾಗಾಗಿ ನಾಳೆ ಬೆಳಿಗ್ಗೆ ಸಿಂಫ್ವಿ ಹಾಗೂ ಕಪಿಲ್ ಸಿಬಲ್ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ನಾಳೆ ಮಂತ್ರಾಲಯ ಪ್ರವಾಸವನ್ನು ರದ್ದು ಮಾಡಿದ್ದಾರೆ.