ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸ್ವಯಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಜಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವಾಗಿ ಇದೇ ಆಗಸ್ಟ್ 23ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಹೌದು ಆಗಸ್ಟ್ 23ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಳಿದ್ದು, ಪ್ರಾಸಿಕ್ಯೂಷನ್ ವಿಚಾರವಾಗಿ ವರಿಷ್ಟರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಅಲ್ಲದೆ ಪ್ರಸಕ್ತ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ. ಹೈಕಮಾಂಡ್ ಮಟ್ಟದಲ್ಲಿ ಹಿರಿಯ ವಕೀಲರನ್ನು ಭೇಟಿ ಮಾಡಲು ಪ್ಲಾನ್ ಮಾಡಿದ್ದಾರೆ.
ಸದ್ಯ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಅವಶ್ಯಕತೆ ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ಇದೆ. ಹಾಗಾಗಿ ಕಾರ್ಯಕರ್ತರಿಂದ ಹಿಡಿದುಕೊಂಡು ಹೈಕಮಾಂಡ್, ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ಇದಕ್ಕೂ ಮುಂಚೆ ಆಗಸ್ಟ್ 22ರಂದು CLP ಮೀಟಿಂಗ್ ನಡೆಸಲಿದ್ದಾರೆ. ಪ್ರತಿ ಹಂತದಲ್ಲೂ ಸಿಎಂ ಸಿದ್ದರಾಮಯ್ಯ ಎಚ್ಚರಿಕೆಯ ಹೆಜ್ಜೆಯನ್ನು ಇಡುತ್ತಿದ್ದಾರೆ.