ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಬ್ಬರಕ್ಕೆ ಹಲವಡೆ ಹಾನಿಯಾಗಿದ್ದು, ಅತಿ ಹೆಚ್ಚು ಹಾನಿಗೆ ಒಳಗಾದ ಉತ್ತರ ಕನ್ನಡ ಜಿಲ್ಲೆಗೆ ನಾಳೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದು,ಮಳೆಹಾನಿ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅತಿಹೆಚ್ಚು ಹಾನಿಗೆ ಒಳಗಾದ ಉತ್ತರ ಕನ್ನಡ ಜಿಲ್ಲೆಯ ಆಯ್ದ ಸ್ಥಳಗಳಿಗೆ ನಾಳೆ ಭೇಟಿ ನೀಡಿ, ಪರಿಹಾರ ಕಾರ್ಯದ ಪರಿಶೀಲನೆ ನಡೆಸಿ, ಸಂತ್ರಸ್ತರ ಅಹವಾಲುಗಳನ್ನು ಆಲಿಸಲಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳ ಜನರ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗೆ ನಮ್ಮ ಸರ್ಕಾರವು ಈಗಾಗಲೇ ರೂ.775 ಕೋಟಿ ಹಣ ನೀಡಿದ್ದು, ಅಗತ್ಯವಿದ್ದರೆ ಇನ್ನೂ ಹೆಚ್ಚಿನ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.