ಹಾಸನ : ನಿನ್ನೆ ಡಿಕೆ ಶಿವಕುಮಾರ್ ಹಾಸನಕ್ಕೆ ಭೇಟಿ ನೀಡಿ ಹಾಸನಾಂಬೆ ದೇವಿಯ ದರ್ಶನ ಮಾಡಿ ಪೂಜೆ ಸಲ್ಲಿಸಿದರು. ಇಂದು ಮುಖ್ಯಮಂತ್ರಿ ಆಗಿ ಎರಡನೇ ಬಾರಿಗೆ ಸಿಎಂ ಸಿದ್ದರಾಮಯ್ಯ ಹಾಸನಾಂಬೆ ದೇವಿಯ ದರ್ಶನ ಪಡೆದರು. ಕಳೆದ ವರ್ಷ ಕೂಡ ಸಿಎಂ ಸಿದ್ದರಾಮಯ್ಯ ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದು, ಈ ಬಾರಿಯೂ ಕೂಡ ಸಿಎಂ ಸಿದ್ದರಾಮಯ್ಯ ಹಾಸನಾಂಬೆ ದೇವಿಯ ದರ್ಶನ ಪಡೆದರು. ಸಿಎಂ ಸಿದ್ದರಾಮಯ್ಯಗೆ ಸಚಿವ ರಾಮಲಿಂಗಾ ರೆಡ್ಡಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಶಾಸಕರಾದ ಶಿವಲಿಂಗೇಗೌಡ ಸೇರಿದಂತೆ ಹಲವರು ಗಣ್ಯರು ಉಪಸ್ಥಿತರಿದ್ದರು.
ಇನ್ನು ರಾಜ್ಯ ರಾಜಕಾರಣದಲ್ಲಿ ನವೆಂಬರ್ ನಲ್ಲಿ ಭಾರಿ ದೊಡ್ಡ ಕ್ರಾಂತಿಯಾಗಲಿದೆ ಎಂದು ಗುಸು-ಗುಸು ಕೇಳಿ ಬರುತ್ತಿದೆ. ಇದರ ಮಧ್ಯೆ ಸಂಪುಟ ಪುನರ್ ರಚನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರಿಗೆ ಸಚಿವರಿಗೆ ಔತನಕೂಟ ಏರ್ಪಡಿಸಿದ್ದರು. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಔತಣಕೂಟಕ್ಕೂ ನಾಯಕತ್ವ ಬದಲಾವಣೆಗೂ ಯಾವುದೇ ರೀತಿ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.
ಹಾಸನದಲ್ಲಿ ಮಾತನಾಡಿದ ಅವರು, ಡಿನ್ನರ್ ಪಾರ್ಟಿಗೂ ರಾಜಕೀಯಕ್ಕೂ ಯಾವುದೇ ರೀತಿ ಸಂಬಂಧ ಇಲ್ಲ. ಯಾವಾಗಲೂ ನಾವು ಸೇರುತ್ತೇವೆ ಪಕ್ಷದ ವಿಚಾರದ ಕುರಿತು ಚರ್ಚಿಸುತ್ತೇವೆ. ಆಗಾಗ ಊಟಕ್ಕೆ ಸೇರುತ್ತೇವೆ. ಗೆಟ್ ಟುಗೆದರ್ ಮಾಡುತ್ತೇವೆ. ಹಾಗಾಗಿ ಔತಣ ಕೂಟಕ್ಕೂ ನಾಯಕತ್ವ ಬದಲಾವಣೆಗೆ ಯಾವುದೇ ರೀತಿಯಾದ ಸಂಬಂಧ ಇಲ್ಲ. ಹೈಕಮಾಂಡ್ ಬಿಹಾರ ಚುನಾವಣೆಯ ಬಗ್ಗೆ ಗಮನಹರಿಸಿದೆ ಹೈಕಮಾಂಡ್ ಏನು ಹೇಳುತ್ತದೆ ಹಾಗೆ ಮಾಡೋಣ ಎಂದು ಹಾಸನಾಂಬೆ ದರ್ಶನದ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.