ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದೆಹಲಿಗೆ ತೆರಳಿದ್ದ ಸಿಎಂ ಸಿದ್ಧರಾಮಯ್ಯ ಬೆಂಗಳೂರಿಗೆ ಆಗಮಿಸಿದ್ದು, ಆಸ್ಪತ್ರೆಗೆ ಭೇಟಿ ನೀಡಿ ಪತ್ನಿ ಆರೋಗ್ಯ ವಿಚಾರಿಸಿದ್ದಾರೆ.
ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ದಿಢೀರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪತ್ನಿ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪತ್ನಿ ಆರೋಗ್ಯ ಸ್ಥಿರವಾಗಿದೆ. ಏನೂ ಸಮಸ್ಯೆ ಇಲ್ಲ. ಶ್ವಾಸಕೋಶ ಸೋಂಕು ಇದೆ. ಈಗ ಸುಧಾರಣೆ ಕಾಣುತ್ತಿದೆ. ಇನ್ನು ಎರಡು ಮೂರು ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಎಂದು ಹೇಳಿದ್ದಾರೆ.








