ಬೆಂಗಳೂರು : ಕ್ಯಾನ್ಸರ್ ಗೆದ್ದು ಬೆಂಗಳೂರಿಗೆ ವಾಪಸ್ ಆಗಿರುವ ನಟ ಶಿವರಾಜ್ ಕುಮಾರ್ ಅವರನ್ನು ಇಂದು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಸದ್ಯ ಕ್ಯಾನ್ಸಲ್ ಚಿಕಿತ್ಸೆ ಬಳಿಕ ಬೆಂಗಳೂರಿಗೆ ಆಗಮಿಸಿರುವ ನಟ ಶಿವರಾಜಕುಮಾರ್ ಅವರ ನಾಗವಾರದಲ್ಲಿರುವ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಅನಾರೋಗ್ಯ ನಿಮಿತ್ತ ವಿದೇಶದಲ್ಲಿ ಶಸ್ತ್ರಚಿಕಿತ್ಸೆಗೆ ಪಡೆದು ಗುಣಮುಖರಾಗಿ ಬಂದಿರುವ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರನ್ನು ಮುಖ್ಯಮಂತ್ರಿ @siddaramaiah ಅವರು ಭೇಟಿಯಾಗಿ, ಆರೋಗ್ಯ ವಿಚಾರಿಸಿದರು. pic.twitter.com/ANZpbR110Y
— CM of Karnataka (@CMofKarnataka) January 27, 2025
ಕಳೆದ 2024 ಡಿಸೇಂಬರ್ 18ರಂದು ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದ್ದ ಶಿವರಾಜ್‌ಕುಮಾರ್ ಅವರಿಗೆ ಚಿಕಿತ್ಸೆ ಯಶಸ್ವಿಯಾಗಿದೆ. ಚಿಕಿತ್ಸೆಯ ನಂತರವೂ ಕೆಲ ದಿನಗಳ ಕಾಲ ಅಮೆರಿಕಾದಲ್ಲೇ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ಶಿವಣ್ಣ ಹೆಚ್ಚು ಕಮ್ಮಿ ಒಂದು ತಿಂಗಳ ನಂತರ ಬೆಂಗಳೂರಿಗೆ ಮರಳಿ ಬಂದಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.