ಬೆಂಗಳೂರು: ಬೃಹತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಕಡತಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್, ರಾಜ್ಯಪಾಲರ ಮೇಲೆ ರಾಜಕೀಯ ಒತ್ಡಡ ಇದೆ. ಇದೊಂದು ರಾಜಕೀಯ ಷಡ್ಯಂತ್ರ, ಸಿದ್ದರಾಮಯ್ಯ ಯಾವುದೇ ಕಾರಣಕ್ಕೆ ರಾಜೀನಾಮೆ ಕೊಡಲ್ಲ. ಬಿಜೆಪಿಯವರ ಷಡ್ಯಂತ್ರ ಎಂದು ಹೇಳಿದ್ದಾರೆ.