ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರು ಸಿಟಿ ರೌಂಡ್ಸ್ ಕೈಗೊಂಡಿದ್ದು, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ಸಿಟಿ ರೌಂಡ್ಸ್ ಕೈಗೊಂಡಿದ್ದು, ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ರಾಮಲಿಂಗ ರೆಡ್ಡಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೇರಿ ಹಲವರು ಸಾಥ್ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಮೊದಲಿಗೆ ಮೈಸೂರು ರಸ್ತೆಯ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಇರುವ ರಾಜಕಾಲುವೆ ಪರಿಶೀಲನೆ ನಡೆಸಿದ್ದು, ಬಳಿಕ ನಾಯಂಡಹಳ್ಳಿ ಜಂಕ್ಷನ್ ಬಳಿಕ ರಾಜಕಾಲುವೆ ಹೂಳು ತೆರವು ಪರಿಶೀಲನೆ, ಜೆ.ಪಿ.ನಗರದ ರಾಗಿಗುಡ್ಡ ಜಂಕ್ಷನ್ ವೀಕ್ಷಣೆ, ಅನುಗ್ರಹ ಲೇಔಟ್ ನ ರಾಜಕಾಲುವೆ ಕಾಮಗಾರಿ, ಸಿಲ್ಕ್ ಬೋರ್ಡ್ ಜಂಕ್ಷನ್ ನ ರಾಜ ಕಾಲುವೆ ಕಾಮಗಾರಿ, ಯೆಮಲೂರು ಬಳಿಕ ರಾಜಕಾಲುವೆ ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಗೃಹ ಕಚೇರಿಗೆ ಸಿಎಂ ಸಿದ್ದರಾಮಯ್ಯ ವಾಪಸ್ ಆಗಲಿದ್ದಾರೆ.