ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ಬೆಂಗಳೂರು ಸಿಟಿ ರೌಂಡ್ಸ್‌ ಕೈಗೊಂಡಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವ ಕೆಲಸ ಮಾಡಿದ್ದಾರೆ.

ಬೆಂಗಳೂರು ನಗರದಲ್ಲಿ ಮಳೆ ಬಂದಾಗ ಉದ್ಭವಿಸುವ ಸಮಸ್ಯೆಗಳು, ರಸ್ತೆ ಅಭಿವೃದ್ಧಿ ಹಾಗೂ ಮೆಟ್ರೋ ಕಾಮಗಾರಿ ಕಾರಣದಿಂದ ಸಂಚಾರಕ್ಕೆ ಎದುರಾಗುತ್ತಿರುವ ತೊಡಕು ಸೇರಿದಂತೆ ಸಾರ್ವಜನಿಕರ ವಿವಿಧ ಸಮಸ್ಯೆಗಳಿಗೆ ಸೂಕ್ತ ಹಾಗೂ ಶೀಘ್ರ ಪರಿಹಾರ ಒದಗಿಸಲು ಖುದ್ದಾಗಿ ನಗರ ಪ್ರದಕ್ಷಿಣೆ ಮಾಡಿ, ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇನ್ನು ವಿಜಯನಗರ ವಿಧಾನಸಭಾ ಕ್ಷೇತ್ರದ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪದ ರಾಜಕಾಲುವೆಯಲ್ಲಿ ಮಳೆಗಾಲದಲ್ಲಿ ಪ್ರವಾಹ ಉಂಟಾಗುತ್ತಿತ್ತು. ಇದರಿಂದ ಸಾರ್ವಜನಿಕರಿಗೆ ಮಳೆ ಬಂದರೆ ಸೆಮಸ್ಯೆ ಉಂಟಾಗುತ್ತಿತ್ತು. ಇದಕ್ಕೆ ಸಮಾನಾಂತರವಾಗಿ ಇನ್ನೊಂದು ಕಾಲುವೆ ನಿರ್ಮಿಸುವುದರಿಂದ ಪ್ರವಾಹ ತಗ್ಗಿಸಬಹುದಾಗಿದೆ. ಪ್ರವಾಹ ನಿಯಂತ್ರಣ ಕಾಮಗಾರಿಗೆ 11.5 ಕೋಟಿ ರೂ. ಅಂದಾಜು ವೆಚ್ಚದ ಯೋಜನೆ ರೂಪಿಸಲಾಗಿದ್ದು, ಈ ಕಾಮಗಾರಿಯನ್ನು ಕೂಡಲೇ ಅನುಷ್ಠಾನⓇ ಮಾಡಬೇಕು ಹಾಗೂ ರಾಜಕಾಲುವೆಗೆ ಸಾರ್ವಜನಿಕರು ಕಸ ಎಸೆಯುವುದನ್ನು ತಡೆಗಟ್ಟಲು ಅಗತ್ಯ ಕ್ರಮ ವಹಿಸಬೇಕು. ರಾಜಕಾಲುವೆಯ ಸಮಸ್ಯೆ ಈ ವರ್ಷವೇ ಬಗೆಹರಿಯಬೇಕು ಇಲ್ಲದಿದ್ದರೆ ಮುಖ್ಯ ಇಂಜಿನಿಯರ್ ಅವರನ್ನು ಹೊಣೆ ಮಾಡಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

Share.
Exit mobile version