ಚಾಮರಾಜನಗರ : ಕೊಳ್ಳೇಗಾಲದ ಮಾಜಿ ಶಾಸಕರು ಹಾಗೂ ಉಗ್ರಾಣ ನಿಗಮದ ಅಧ್ಯಕ್ಷರು ಆಗಿದಂತಹ ಎಸ್ ಜಯಣ್ಣ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಅವರು ನಿಧನ ಹೊಂದಿದ್ದಾರೆ.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಉಸಿರಾಟದ ತೊಂದರೆ ಇತ್ತು ಎಂದು ಸಹ ಅವರು ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು ಈ ವೇಳೆ ಆಸ್ಪತ್ರೆಗೆ ಕರೆದುಕೊಂಡು ಹೋಗೋ ಮಾರ್ಗ ಮಧ್ಯದಲ್ಲಿ ಅವರು ನಿಧನರಾಗಿದ್ದಾರೆ. ಎಸ್ ಜಯಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬಹಳ ಆಪ್ತರಾಗಿದ್ದರು ಎನ್ನಲಾಗಿದೆ.