ಕೋಲಾರ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಕೋಲಾರ ಪ್ರವಾಸ ಕೈಗೊಂಡಿದ್ದು, ಕೋಲಾರದಲ್ಲಿ ಇಂದು ಸಿಎಂ ಸಿದ್ದರಾಮಯ್ಯರಿದ್ದ ಹೆಲಿಕಾಪ್ಟರ್ ತಪಾಸಣೆ ಮಾಡಲಾಗಿದೆ.
ಇಂದು ಸಿಎಂ ಸಿದ್ದರಾಮಯ್ಯ ಕೋಲಾರದ ಆರ್. ಎಲ್ ಜಾಲಪ್ಪ ಆಸ್ಪತ್ರೆ ಹೆಲಿಪ್ಯಾಡ್ ಗೆ ಬಂದ ವೇಳೆ ಚುನಾವಣಾ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಕೋಲಾರಕ್ಕೆ ಬಂದಿಳಿದಿದ್ದು, ಇಂದು ಬೃಹತ್ ರೋಡ್ ಶೋ ನಡೆಸಲಿದ್ದಾರೆ.