Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆಯ ‘ಸರ್ಜಿಕಲ್ ಸ್ಟ್ರೈಕ್’ ಖಚಿತ: 2025ರ ಗುಪ್ತ ಕಾರ್ಯಾಚರಣೆಯ ರಹಸ್ಯ ಬಯಲು!

26/01/2026 9:41 AM

BREAKING : 77ನೇ ಗಣರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಗೆ CM ಸಿದ್ದರಾಮಯ್ಯ ಸಂದೇಶ

26/01/2026 9:34 AM

ಭಾರತದಲ್ಲಿ ಯುರೋಪಿಯನ್ ಕಾರುಗಳು ಅಗ್ಗ: 110% ಇದ್ದ ಆಮದು ಸುಂಕ 40%ಕ್ಕೆ ಇಳಿಕೆ, ಶೀಘ್ರವೇ ಐತಿಹಾಸಿಕ ಒಪ್ಪಂದ!

26/01/2026 9:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : 77ನೇ ಗಣರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಗೆ CM ಸಿದ್ದರಾಮಯ್ಯ ಸಂದೇಶ
KARNATAKA

BREAKING : 77ನೇ ಗಣರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಗೆ CM ಸಿದ್ದರಾಮಯ್ಯ ಸಂದೇಶ

By kannadanewsnow5726/01/2026 9:34 AM

ಬೆಂಗಳೂರು : ಗಣರಾಜ್ಯೋತ್ಸವದ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ‌ ಧ್ವಜಾರೋಹಣ ನೆರವೇರಿಸಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು‌ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ವಂದಿಸಿದರು.

77ನೇ ಗಣರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿಯವರ ಸಂದೇಶ

1) ಕರ್ನಾಟಕದ ಸಮಸ್ತ ಜನಕೋಟಿಗೆ 77ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

2) ಭಾರತವು ತನ್ನನ್ನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು ಇದೇ ಜನವರಿ 26ಕ್ಕೆ 76 ವರ್ಷಗಳು ಪೂರ್ಣಗೊಂಡಿದೆ. 77ನೇ ಗಣರಾಜ್ಯೋತ್ಸವದ ಶುಭ ದಿನವಾದ ಇಂದು ಸಂವಿಧಾನದ ಮಹತ್ವ ಮತ್ತು ಪ್ರಜಾಪ್ರಭುತ್ವವನ್ನು ಬಲಪಡಿಸುವ ಒಂದಿಷ್ಟು ಚಿಂತನೆಗಳನ್ನು ನನ್ನ ನಾಡಿನ ಜನತೆಯಲ್ಲಿ ಹಂಚಿಕೊಳ್ಳಬಯಸುತ್ತೇನೆ.

3) ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ, ಆರ್ಥಿಕ, ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ, ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿಪಡಿಸಲು ಎಲ್ಲರ ನಡುವೆ ಭ್ರಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಆಶಯವಾಗಿದೆ.

4) ಕರ್ನಾಟಕದಲ್ಲಿ 800 ವರ್ಷಗಳ ಹಿಂದೆಯೇ ಪ್ರಜಾರಾಜ್ಯದ ಬೀಜಾಂಕುರವಾಗಿತ್ತು ಎನ್ನುವುದನ್ನು ಈ ಸಂದರ್ಭದಲ್ಲಿ ನಾವೆಲ್ಲ ಹೆಮ್ಮೆಯಿಂದ ನೆನಪು ಮಾಡಿಕೊಳ್ಳಬೇಕಾಗಿದೆ. ಅದು ಸಾಧ್ಯವಾಗಿರುವುದು ಸಾಮಾಜಿಕ ಕ್ರಾಂತಿಯ ಹರಿಕಾರ ಬಸವಣ್ಣನವರ ನೇತೃತ್ವದಲ್ಲಿ ನಡೆದಿದ್ದ ಶರಣ ಚಳವಳಿಯಿಂದ. ಕೂಡಲ ಸಂಗಮದ ಅನುಭವ ಮಂಟಪ ಪ್ರಪಂಚದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾದರಿ ಸ್ವರೂಪದ್ದು. ಸಮಾಜದ ಅತ್ಯಂತ ಕೆಳಸ್ತರದ ಜನರೂ ಕೂಡಾ ಚರ್ಚೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಅಭಿಪ್ರಾಯ, ಅಹವಾಲುಗಳನ್ನು ವ್ಯಕ್ತಪಡಿಸುವ ಸಮಾನವಕಾಶ ಅನುಭವ ಮಂಟಪದಲ್ಲಿತ್ತು. ಇದು ನಾವಿಂದು ಅನುಭವಿಸುತ್ತಿರುವ ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಗಲ್ಲು.

5) ಭಾರತದಲ್ಲಿ ನ್ಯಾಯಯುತ ಸಾಮಾಜಿಕ ವ್ಯವಸ್ಥೆಯನ್ನು ನಿರ್ಮಿಸುವ ಈ ತೀರ್ಮಾನ ಒಂದು ಚಾರಿತ್ರಿಕೆ ಸಂದರ್ಭದಲ್ಲಿ ಮೈದಾಳಿತು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಈಗಿನ ಸಂವಿಧಾನ ಅಂಗೀಕಾರವಾಗುವುದಕ್ಕಿಂತ ಮೊದಲು ಭಾರತದಲ್ಲಿ ಒಂದು ಅಲಿಖಿತ ಸಂವಿಧಾನ ಇತ್ತು. ಅದು ಅಸಮಾನತೆಯನ್ನು ಒಪ್ಪಿಕೊಂಡ, ಲಿಂಗ ಮತ್ತು ಜಾತಿ ಆಧಾರದಲ್ಲಿಯೇ ಮನುಷ್ಯನ ಯೋಗ್ಯತೆ, ಅವಕಾಶಗಳನ್ನು ನಿರ್ಧರಿಸುವ ಅಲಿಖಿತ ಸಂವಿಧಾನ.

6) ಆ ಸಾಂಪ್ರದಾಯಿಕ ಸಾಮಾಜಿಕ ವ್ಯವಸ್ಥೆಯಲ್ಲಿ ಕೆಲವು ವರ್ಗಗಳು ಅಂದರೆ ಶೂದ್ರರು, ಮಹಿಳೆಯರು ಮತ್ತು ಅಸ್ಪೃಶ್ಯರು ಸಂಪತ್ತನ್ನು ಹೊಂದುವ, ಜ್ಞಾನವನ್ನು ಗಳಿಸುವ, ಘನತೆಯಿಂದ ಬದುಕುವ ಹಕ್ಕಿನಿಂದ ವಂಚಿತರಾಗಿದ್ದರು. ಈ ಮನುಷ್ಯವಿರೋಧಿ ಅಲಿಖಿತ ಸಂವಿಧಾನವನ್ನು ತಿರಸ್ಕರಿಸಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೊಸದೊಂದು ಸಂವಿಧಾನವನ್ನು ಭಾರತಕ್ಕೆ ನೀಡಿದರು.

7) ಭಾರತದಲ್ಲಿ ಆಧುನಿಕ ಹಾಗೂ ಪ್ರಜಾಪ್ರಭುತ್ವವಾದಿ ರಾಷ್ಟ್ರಪ್ರಭುತ್ವದ ಹುಟ್ಟಿನೊಂದಿಗೆ ಈ ಬಗೆಯ ತಡೆಗೋಡೆಗಳನ್ನು ಮುರಿಯುವ ಪ್ರಯತ್ನ ಪ್ರಾರಂಭವಾಯಿತು. ಯಾರು ಯಾವ ಸಾಮಾಜಿಕ ಮೂಲದಿಂದಲೇ ಬಂದಿರಲಿ, ಅಭಿವೃದ್ಧಿಯ ಹಾಗೂ ಪ್ರಗತಿಯ ಫಲ ಎಲ್ಲರಿಗೂ ಸೇರಬೇಕು ಎಂಬುದು ಸಂವಿಧಾನದಲ್ಲಿ ಸೂಚಿತವಾದ ಸರ್ವರನ್ನೂ ಒಳಗೊಳ್ಳುವ ಸಾಮಾಜಿಕ ಮರುರಚನೆಯ ನಿರ್ಣಯವಾಗಿದೆ.
8) ಭಾರತ ಒಂದು ರಾಷ್ಟ್ರವಾಗಿ ಬೆಳೆಯಬೇಕಾದರೆ, ಸಾಮಾಜಿಕ ಸಂಘರ್ಷಗಳಿಂದ ಹೊರಬರಬೇಕಾದರೆ ಈ ಸಮಾಜದ ಪುರಾತನ ಕಾಲದ ಶ್ರೇಣಿಕೃತ ವ್ಯವಸ್ಥೆಗಳನ್ನು ಒಡೆದು ಸಮಾಜದ ಪುನರ್ ರಚನೆ ಮಾಡಲೇಬೇಕಾಗುತ್ತದೆ. ನಾಗರಿಕನೊಬ್ಬನ ಸ್ಥಾನಮಾನ ಆತನ ಸತ್ವ-ಸಾಧನೆಗಳಿಂದ ನಿರ್ಣಯವಾಗಬೇಕೇ ಹೊರತು, ಆತನ ಹುಟ್ಟು ಇಲ್ಲವೇ ಪುರಾತನ ಕಾಲದಿಂದ ಬಂದ ಸಾಮಾಜಿಕ ಮೂಲಗಳಿಂದ ಅಲ್ಲ ಎಂಬುದನ್ನು ಪ್ರತಿಪಾದಿಸುವ ನಾಗರಿಕ ಸಮಾಜದ ನಿರ್ಮಾಣ ನಮ್ಮ ಸಂವಿಧಾನದ ಮೂಲ ಆಶಯವಾಗಿದೆ.
9) ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ದೇಶಕ್ಕೆ ಅರ್ಪಿಸುವಾಗ ಮುಂದಿನ ದಿನಗಳಲ್ಲಿ ದೇಶವನ್ನು ಆಳುವವರಿಗೆ ಎರಡು ಮುಖ್ಯವಾದ ಜವಾಬ್ದಾರಿಗಳನ್ನು ಒತ್ತು ಕೊಟ್ಟು ಹೇಳಿದ್ದರು. ಮೊದಲನೆಯದು ಈ ದೇಶದಲ್ಲಿ ರಾಜಕೀಯ ಪ್ರಜಾಪ್ರಭುತ್ವದ ರಕ್ಷಣೆ, ಆ ಮೂಲಕ ದೇಶದ ಸಾರ್ವಭೌಮತೆಯನ್ನು ಕಾಪಾಡುವುದು. ಎರಡನೆಯದಾಗಿ ಆರ್ಥಿಕ ಪ್ರಜಾಪ್ರಭುತ್ವವನ್ನು ಸಾಧಿಸುತ್ತಾ ಹೋಗುವುದು.
10) ದೇಶ ನಿಜಕ್ಕೂ ಬಲಗೊಳ್ಳುವುದು ಮತ್ತು ಸದೃಢಗೊಳ್ಳುವುದು ಆರ್ಥಿಕ ಪ್ರಜಾಪ್ರಭುತ್ವದಿಂದ. ಇದನ್ನು ಸಾಧಿಸಬೇಕೆಂದರೆ ಸಾವಿರಾರು ಜಾತಿಗಳಾಗಿ, ಮೇಲು ಕೀಳು ಎಂಬ ತಾರತಮ್ಯಗಳಲ್ಲಿ ಛಿದ್ರವಾಗಿರುವ ಈ ದೇಶದಲ್ಲಿ ಸಾಮಾಜಿಕ ನ್ಯಾಯದ ಮೂಲಕ ಆರ್ಥಿಕ ಸಮಾನತೆಯನ್ನು ಸ್ಥಾಪಿಸಿ ದೇಶವನ್ನು ಆಂತರಿಕವಾಗಿ ಸಧೃಡಗೊಳಿಸಬೇಕಾಗಿದೆ. ಕೇವಲ ರಾಜಕೀಯ ಪ್ರಜಾತಂತ್ರದಿಂದ ನಾವು ತೃಪ್ತರಾಗಬಾರದು, ಅದನ್ನು ಸಾಮಾಜಿಕ ಪ್ರಜಾಪ್ರಭುತ್ವವನ್ನು ಮಾಡುವ ನಮ್ಮ ಪ್ರಯತ್ನ ಜಾರಿಯಲ್ಲಿರಬೇಕು ಎಂದು ಅವರು ಬುದ್ದಿ ಮಾತು ಹೇಳಿದ್ದರು.
11) ನಮ್ಮ ಸರ್ಕಾರದ ಎಲ್ಲ ಯೋಚನೆ-ಯೋಜನೆಗಳಿಗೆ ಮಾರ್ಗದರ್ಶನ ನೀಡುತ್ತಾ ಬಂದಿರುವುದು ನಮ್ಮ ಸಂವಿಧಾನ. ಅದರೊಳಗಿನ ಅಕ್ಷರ-ಅಕ್ಷರಗಳಿಗೂ ನಾನು, ನಮ್ಮ ಪಕ್ಷ ಮತ್ತು ಸರ್ಕಾರ ಬದ್ದವಾಗಿದೆ.

12) ರಾಜ್ಯದ ಜನತೆಯ ಬಡತನ, ಅನಾರೋಗ್ಯ, ಅನಕ್ಷರತೆ, ಅಪೌಷ್ಠಿಕತೆಯನ್ನು ನಿವಾರಿಸಿ ಹಸಿವು ಮುಕ್ತ, ಅನಾರೋಗ್ಯ ಮುಕ್ತ, ಅನಕ್ಷರತೆ ಮುಕ್ತ ಮತ್ತು ಭಯ ಮುಕ್ತ ಸಮಾಜವನ್ನು ನಿರ್ಮಿಸುವುದು ಚುನಾಯಿತ ಸರ್ಕಾರದ ಸಂವಿಧಾನ ಬದ್ದ ಕರ್ತವ್ಯವಾಗಿದೆ. ಬಡತನ ಎನ್ನುವುದು ಅಪರಾಧ ಅಲ್ಲ. ಇದು ಅಸಮಾನ ಸಂಪತ್ತು ಮತ್ತು ಅವಕಾಶ ಹಂಚಿಕೆಯ ಫಲ ಎನ್ನುವುದನ್ನು ನಾವು ಮರೆಯಬಾರದು. ನಮ್ಮ ಸಂಪತ್ತು ಮತ್ತು ಅವಕಾಶದ ಸಮಾನ ಹಂಚಿಕೆಯಾದಾಗ ಮಾತ್ರ ಸಮೃದ್ಧ, ಬಲಿಷ್ಠ ಮತ್ತು ಕ್ರಿಯಾಶಾಲಿಯಾದ ಸಮಾಜ ನಿರ್ಮಾಣ ಸಾಧ್ಯ ಎನ್ನುವುದನ್ನು ನಾನು ಬಲವಾಗಿ ನಂಬಿದ್ದೇನೆ.

13) ಸಂವಿಧಾನದ ಪರಿಚ್ಚೇದ 39ರ ಪ್ರಕಾರ ಪ್ರತಿಯೊಬ್ಬ ಪ್ರಜೆಗೂ ಜೀವನ ನಿರ್ವಹಣೆಯ ಹಕ್ಕನ್ನು ಅಂದರೆ ಬದುಕುವ ಹಕ್ಕನ್ನು ನೀಡಬೇಕೆಂದು ಹೇಳುತ್ತದೆ. ಪರಿಚ್ಛೇದ 15 (3) ಪ್ರತಿಯೊಬ್ಬ ಮಹಿಳೆ ಮತ್ತು ಮಕ್ಕಳಿಗೆ ಸಂಬಂಧಿಸಿದ ವಿಶೇಷ ಕಾನೂನು ಮಾಡಲು ಅವಕಾಶ ನೀಡಿದೆ.
14) ಜನರ ಪೌಷ್ಠಿಕತೆ ಮತ್ತು ಜೀವನ ಮಟ್ಟವನ್ನು ಹೆಚ್ಚಿಸಿ ಆರೋಗ್ಯವನ್ನು ಅಭಿವೃದ್ದಿ ಪಡಿಸುವುದು ಒಂದು ಸರ್ಕಾರದ ಪ್ರಾಥಮಿಕ ಕರ್ತವ್ಯ ಎಂದು, ಸಂವಿಧಾನದ ಪರಿಚ್ಛೇದ 47ರಡಿಯ ರಾಜನೀತಿಯ ನಿರ್ದೇಶಿತ ತತ್ವ ಹೇಳಿದೆ. ನಮ್ಮ ಸರ್ಕಾರ ತನ್ನ ಮೂಲಭೂತ ಕರ್ತವ್ಯವಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ.
15) ಸಾರ್ವತ್ರಿಕ ಮೂಲ ಆದಾಯದ ಪರಿಕಲ್ಪನೆಯಡಿ (Universal Basic Income) ರೂಪಿತವಾದ ನಮ್ಮ ಗ್ಯಾರಂಟಿ ಯೋಜನೆಗಳು ಇಂದು ಅನ್ನಭಾಗ್ಯ ಯೋಜನೆಯ ಮೂಲಕ ಆಹಾರ ಭದ್ರತೆಯನ್ನು, ಗೃಹಜ್ಯೋತಿಯ ಮೂಲಕ ಇಂಧನ ಖಾತರಿಯನ್ನು ನಾಡಿನ ಜನತೆಗೆ ಒದಗಿಸಿವೆ. ಗೃಹಲಕ್ಷ್ಮಿ ಯೋಜನೆಯು ಆರ್ಥಿಕವಾಗಿ ಹಿಂದುಳಿದಿರುವ ಈ ನಾಡಿನ ಕುಟುಂಬಗಳ ಯಜಮಾನಿಯರಿಗೆ ಮಾಸಿಕ 2 ಸಾವಿರ ರೂಪಾಯಿ ಒದಗಿಸುವ ಮೂಲಕ ಅವರ ಕನಿಷ್ಠ ಅಗತ್ಯಗಳಿಗೆ ಬೆಂಗಾವಲಾಗಿದೆ. ಅದೇ ರೀತಿ, ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತ ಪ್ರಯಾಣದ ಖಾತರಿಯನ್ನು ನೀಡಿ ಅವರನ್ನು ಸ್ವಾವಲಂಬಿಗಳಾಗಿಸಿದೆ. ಯುವನಿಧಿ ಯೋಜನೆಯು ಪದವೀಧರ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆಯನ್ನು ನೀಡುವ ಮೂಲಕ ಅವರಲ್ಲಿ ಮಾನಸಿಕ ಸ್ಥೈರ್ಯ ತುಂಬಿ ಉತ್ತಮ ಉದ್ಯೋಗಾವಕಾಶಗಳಿಗೆ ತರಬೇತಿ ಪಡೆಯಲು ಅವಕಾಶ ಕಲ್ಪಿಸಿದೆ.
16) ಕರ್ನಾಟಕದಲ್ಲಿ ಇಂದು ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಯೊಂದು ಕುಟುಂಬವು ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ತಿಂಗಳಿಗೆ 5-6 ಸಾವಿರ ರೂಪಾಯಿ ಉಳಿತಾಯ ಕಾಣುತ್ತಿದ್ದು, ವಾರ್ಷಿಕ 60 ರಿಂದ 70 ಸಾವಿರ ರೂಪಾಯಿ ಈ ಕುಟುಂಬಗಳಿಗೆ ಉಳಿತಾಯವಾಗುತ್ತಿದೆ. ಅದೇ ರೀತಿ, ಮಧ್ಯಮ, ಮೇಲ್ಮಧ್ಯಮ ವರ್ಗದ ಕುಟುಂಬಗಳಿಗೂ ಸಹ ಗೃಹಜ್ಯೋತಿ, ಶಕ್ತಿ, ಯುವನಿಧಿಯಂತಹ ಗ್ಯಾರಂಟಿ ಯೋಜನೆಗಳಿಂದಾಗಿ ವಾರ್ಷಿಕ 25 ರಿಂದ 30 ಸಾವಿರ ರೂಪಾಯಿ ಉಳಿತಾಯ ಕಾಣುತ್ತಿದ್ದಾರೆ. ಈ ಹಣವನ್ನು ಅವರು ತಮ್ಮ ಮಕ್ಕಳ ಶಿಕ್ಷಣಕ್ಕೆ, ಆರೋಗ್ಯಕ್ಕೆ, ಭವಿಷ್ಯದ ಉಳಿತಾಯಕ್ಕೆ ಬಳಸುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಪರಿಣಾಮ ಇಂದು ಸಮಾಜದಲ್ಲಿ ಭದ್ರತೆಯ ಭಾವನೆ ಮನೆ ಮಾಡಿದೆ.
17) ಮುಖ್ಯಮಂತ್ರಿಯಾಗಿ ಸಂವಿಧಾನದ ಆಶಯಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ತಲೆಮಾರುಗಳ ಅಸಮಾನತೆ ಮತ್ತು ತಾರತಮ್ಯವನ್ನು ಅನುಭವಿಸಿದವರಿಗೆ ಅವಕಾಶಗಳನ್ನು ಒದಗಿಸುವ ಒಂದು ಅಸ್ತ್ರವಾಗಿ ಅಭಿವೃದ್ಧಿಯನ್ನು ನಾನು ಪರಿಗಣಿಸಿದ್ದೇನೆ.
18) ಸಂವಿಧಾನವನ್ನು ವಿರೋಧಿಸುತ್ತಿರುವವರು ಸಾಮಾಜಿಕ ಬದಲಾವಣೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವವರು. ಅವರು ಬಡವರ, ರೈತರ, ಕಾರ್ಮಿಕರ, ದಲಿತರ, ಶೋಷಿತರ ಪರವಾದ ಕಾನೂನುಗಳು ಮತ್ತು ಕಾರ್ಯಕ್ರಮಗಳನ್ನು ವಿರೋಧಿಸುವವರು ಎನ್ನುವುದನ್ನು ಜನತೆ ಅರ್ಥಮಾಡಿಕೊಳ್ಳಬೇಕು.
19) ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಸಂವಿಧಾನವನ್ನು ಅರ್ಪಿಸಿದಾಗಲೂ ಅದನ್ನು ವಿರೋಧಿಸುವವರಿದ್ದರು. ಈಗಲೂ ಆಗಾಗ ಸಂವಿಧಾನವನ್ನು ಬದಲಾಯಿಸುವ, ಕಿತ್ತೊಗೆಯುವ ಕೂಗುಗಳು ಅಲ್ಲಲ್ಲಿ ಕೇಳಿಬರುತ್ತಿದೆ.
20) ಆದರೆ ಇದು ಸುಲಭದ ಕೆಲಸ ಅಲ್ಲ ಎಂದು ಅರ್ಥಮಾಡಿಕೊಂಡವರು ಅದನ್ನು ನಿಧಾನವಾಗಿ ದುರ್ಬಲಗೊಳಿಸುವ ಪ್ರಯತ್ನದಲ್ಲಿದ್ದಾರೆ. ಇದು ನಿಧಾನವಾಗಿ ವಿಷ ಉಣಿಸುವ ಸಂಚು. ಸಾಂವಿಧಾನಿಕ ಸಂಸ್ಥೆಗಳ ಸ್ವಾಯತ್ತತೆಯನ್ನು ಕಿತ್ತುಕೊಳ್ಳುವ ಮೂಲಕ ಸಂವಿಧಾನವನ್ನು ಅಪ್ರಸ್ತುತ ಮಾಡುವ ಈ ಸಂಚಿನ ಬಗ್ಗೆ ನಾವು ಎಚ್ಚರದಿಂದ ಇರಬೇಕು. ಸಂವಿಧಾನವನ್ನು ನಾವು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ, ದೇಶ ಸುಭದ್ರವಾಗಿ ಉಳಿಯುತ್ತದೆ. ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಗಣರಾಜ್ಯೋತ್ಸವದ ದಿನವಾದ ಇಂದು ಸಂವಿಧಾನವನ್ನು ರಕ್ಷಿಸುವ ಪ್ರತಿಜ್ಞೆಯನ್ನು ಮಾಡಬೇಕಾಗಿದೆ.
21) ಸರ್ಕಾರದ ಯೋಜನೆಗಳು ನೂರಾರು. ಆದರೆ ಅವುಗಳ ಹಿಂದಿನ ಸದಾಶಯ ಮಾತ್ರ ಒಂದೇ. ಅದು ಸಮಸಮಾಜದ ನಿರ್ಮಾಣ, ಸರ್ವರಿಗೂ ಸಮಪಾಲು ಸಮಬಾಳು. ಸರ್ವರನ್ನು ಸಶಕ್ತರನ್ನಾಗಿಸಿ ಶಕ್ತಿಶಾಲಿ ರಾಜ್ಯ ಕಟ್ಟುವ ನಮ್ಮ ಪ್ರಯತ್ನಕ್ಕೆ ನಿಮ್ಮೆಲ್ಲರ ಸಹಕಾರ, ಬೆಂಬಲ, ಆಶೀರ್ವಾದ ಇರಲಿ ಎಂಬ ಮನವಿಯೊಂದಿಗೆ ತಮ್ಮೆಲ್ಲರಿಗೂ ಮತ್ತೊಮ್ಮೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ಸಲ್ಲಿಸಿ ನನ್ನ ಮಾತುಗಳನ್ನು ಮುಗಿಸುತ್ತೆನೆ.

BREAKING: CM Siddaramaiah's message to the people of the country on the occasion of 77th Republic Day
Share. Facebook Twitter LinkedIn WhatsApp Email

Related Posts

BREAKING : ಗಣರಾಜ್ಯೋತ್ಸವ : ಬೆಂಗಳೂರಿನಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

26/01/2026 9:13 AM1 Min Read

BIG NEWS : ರಾಜ್ಯ ಸರ್ಕಾರದಿಂದ `MLA, MLC’ ಗಳಿಗೆ ಅನುದಾನ ಬಿಡುಗಡೆ : ನಿಮ್ಮ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು? ಇಲ್ಲಿದೆ ಮಾಹಿತಿ

26/01/2026 8:37 AM2 Mins Read

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು.!

26/01/2026 8:21 AM1 Min Read
Recent News

ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆಯ ‘ಸರ್ಜಿಕಲ್ ಸ್ಟ್ರೈಕ್’ ಖಚಿತ: 2025ರ ಗುಪ್ತ ಕಾರ್ಯಾಚರಣೆಯ ರಹಸ್ಯ ಬಯಲು!

26/01/2026 9:41 AM

BREAKING : 77ನೇ ಗಣರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಗೆ CM ಸಿದ್ದರಾಮಯ್ಯ ಸಂದೇಶ

26/01/2026 9:34 AM

ಭಾರತದಲ್ಲಿ ಯುರೋಪಿಯನ್ ಕಾರುಗಳು ಅಗ್ಗ: 110% ಇದ್ದ ಆಮದು ಸುಂಕ 40%ಕ್ಕೆ ಇಳಿಕೆ, ಶೀಘ್ರವೇ ಐತಿಹಾಸಿಕ ಒಪ್ಪಂದ!

26/01/2026 9:14 AM

BREAKING : ಗಣರಾಜ್ಯೋತ್ಸವ : ಬೆಂಗಳೂರಿನಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

26/01/2026 9:13 AM
State News
KARNATAKA

BREAKING : 77ನೇ ಗಣರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಗೆ CM ಸಿದ್ದರಾಮಯ್ಯ ಸಂದೇಶ

By kannadanewsnow5726/01/2026 9:34 AM KARNATAKA 4 Mins Read

ಬೆಂಗಳೂರು : ಗಣರಾಜ್ಯೋತ್ಸವದ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ‌ ಧ್ವಜಾರೋಹಣ ನೆರವೇರಿಸಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು‌ಮಹಾತ್ಮ ಗಾಂಧಿ ಅವರ…

BREAKING : ಗಣರಾಜ್ಯೋತ್ಸವ : ಬೆಂಗಳೂರಿನಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

26/01/2026 9:13 AM

BIG NEWS : ರಾಜ್ಯ ಸರ್ಕಾರದಿಂದ `MLA, MLC’ ಗಳಿಗೆ ಅನುದಾನ ಬಿಡುಗಡೆ : ನಿಮ್ಮ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು? ಇಲ್ಲಿದೆ ಮಾಹಿತಿ

26/01/2026 8:37 AM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು.!

26/01/2026 8:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.