ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಇಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಸಿಐಆರ್ ದಾಖಲಿಸಿಕೊಂಡಿದ್ದಾರೆ.ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಡಿ ಸಂಕಷ್ಟ ಎದುರಾಗಿದೆ.
ಇದರ ಬೆನ್ನಲ್ಲೆ ಇಂದು ಬೆಂಗಳೂರಿನಲ್ಲಿ ಕಾವೇರಿ ನಿವಾಸದಲ್ಲಿ ಸಚಿವರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮಹತ್ವದ ವಿಷಯ ಚರ್ಚೆಯಾಗುವ ಸಾಧ್ಯತೆಯಿದ್ದು, ರಾಜಕೀಯ ಬೆಳವಣಿಗೆ ಹಾಗೂ ಕಾನೂನು ಹೋರಾಟದ ಬಗ್ಗೆ ಚರ್ಚಿಸಿದ್ದಾರೆ.
ಸಭೆಯಲ್ಲಿ ಕಾನೂನು ಸಚಿವ ಎಚ್ ಕೆ ಪಾಟೀಲ್, ಎಚ್ ಸಿ ಮಹದೇವಪ್ಪ, ಕೃಷ್ಣ ಬೈರೇಗೌಡ ಹಾಗೂ ಸಿಎಂ ಇಬ್ರಾಹಿಂ ಜೊತೆಗೆ ಚರ್ಚಿಸಿದ್ದಾರೆ. ಇಸಿಐಆರ್ ದಾಖಲಾದ ಬೆನ್ನಲ್ಲೇ ಸಚಿವರ ಜೊತೆಗಿನ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.