ಬೆಂಗಳೂರು : ಮುಡಾ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಹಾಗೂ ಭೈರತಿ ಸುರೇಶ್ ಗೆ ಇಡಿ ಸಮನ್ಸ್ ನೀಡಿರುವ ಹಿನ್ನೆಲೆಯಲ್ಲಿ ಇದನ್ನು ಪ್ರಶ್ನಿಸಿ ಇಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಇಂದು ಸಂಜೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಇಡಿ ಸಮನ್ಸ್ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಇಡಿ ನೋಟಿಸ್ ನೀಡಿದೆ.
ಮುಡಾ ಹಗರಣದ ವಿಚಾರಣೆ ನಡೆಸುತ್ತಿರುವ ED ಇದೀಗ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಈ ಮೂಲಕ ಮುಡಾ ಹಗರಣದಲ್ಲಿ ಮತ್ತೊಂದು ತಿರುವು ಸಿಕ್ಕಂತಾಗಿದೆ. ಇಂದು ಮುಡಾ ಹಗರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಅರ್ಜಿಯ ವಿಚಾರಣೆ ನಡೆಯುತ್ತಿರುವ ಹೊತ್ತಲ್ಲೇ ವಿಚಾರಣೆಗೆ ಹಾಜರಾಗುವಂತೆ ಸಿಎಂ ಪತ್ನಿ ಪಾರ್ವತಿ ಅವರಿಗೆ ಇಡಿ ನೋಟಿಸ್ ನೀಡಿದೆ.