ಚಿಕ್ಕಮಗಳೂರು : ರಾಜ್ಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಚಿಕ್ಕಮಂಗಳೂರಿನಲ್ಲಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಈ ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಕಾರು ಪಲ್ಟಿಯಾದ ಪರಿಣಾಮ ಇಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ.
ಚಿಕ್ಕಮಂಗಳೂರಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು. ಕವಿಕಲ್ ಗಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಚಂದ್ರದ್ರೋಣ ಪರ್ವತದ ಸಾಲಿನ ಕವಿಕಲ್ ಗಂಡಿ ಬಳಿ ಈ ಒಂದು ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಕುರಿತಂತೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.