ಮೈಸೂರು : ದೀಪಾವಳಿ ಹಬ್ಬದ ಅಂಗವಾಗಿ ರಾಜ್ಯದಲ್ಲಿ ಕೇವಲ ಹಸಿರು ಪಟಾಕಿ ಸಿಡಿಸುವುದಕ್ಕೆ ಮಾತ್ರ ಅವಕಾಶವಿದ್ದು, ಅಲ್ಲದೆ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸುವುದಕ್ಕೆ ಅವಕಾಶ ಇದೆ ಎಂದು ಈಗಾಗಲೇ ರಾಜ್ಯ ಸರ್ಕಾರ ತಿಳಿಸಿದೆ.
ಪಟಾಕಿ ಸಿಡಿಸುವ ವೇಳೆ ಯಾವುದೇ ರೀತಿಯಾದಂತಹ ಸಾವು ನೋವುಗಳು ಆಗದಂತೆ ಇದೀಗ ಮೈಸೂರಿನಲ್ಲಿ ಈ ಸ್ಥಳಗಳಲ್ಲಿ ನಿಶಬ್ದ ವಲಯ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವುದು ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.
ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಕೆರೆ, ಕಾರಂಜಿ ಕೆರೆ, ಲಿಂಗಾಬುದಿ ಕೆರೆ, ಸಾರ್ವಜನಿಕ ಉದ್ಯಾನವನಗಳು, ಆಸ್ಪತ್ರೆ ಹಾಗೂ ನರ್ಸಿಂಗ್ ಹೋಂಗಳು, ಶೈಕ್ಷಣಿಕ ಸಂಸ್ಥೆಗಳು, ನ್ಯಾಯಾಲಯ, ಧಾರ್ಮಿಕ ಸ್ಥಳಗಳಲ್ಲಿ 100 ಮೀಟರ್ ಸುತ್ತಳತೆಯ ಪ್ರದೇಶದಲ್ಲಿ ಅ.30ರಿಂದ ನವೆಂಬರ್ 2ರ ಮಧ್ಯರಾತ್ರಿ 12 ಗಂಟೆವರೆಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ.