ಕಲಬುರ್ಗಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈ ಮೊದಲು ನಟ ದರ್ಶನವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು.ಈ ವೇಳೆ ಅವರಿಗೆ ರಾಜ್ಯಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಬಳಿಕ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ್ದರು. ಇದೀಗ ಕಲ್ಬುರ್ಗಿ ಕೇಂದ್ರ ಕಾರಾಗೃಹದಲ್ಲೂ ಕೂಡ ಕೈದಿಗಳು ಮೊಬೈಲ್ ಗುಟ್ಕಾ ಸೇರಿದಂತೆ ಮಾದಕ ವಸ್ತುಗಳ ಬಳಕೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
ಈ ಹಿನ್ನೆಲೆಯಲ್ಲಿ ಇಂದು ಕಮಿಷನರ್ ಡಾ. ಶರಣಪ್ಪ ನೇತೃತ್ವದಲ್ಲಿ ಕಲಬುರ್ಗಿ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಲಾಗಿದೆ. ಹೌದು ಕಲಬುರ್ಗಿ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಲಾಗಿದೆ. ಕಲಬುರ್ಗಿ ಪೊಲೀಸ್ ಕಮಿಷನರ್ ಡಾ. ಶರಣಪ್ಪ ನೇತೃತ್ವದಲ್ಲಿ ದಾಳಿ ನಡೆದಿದೆ. ಡಿಸಿಪಿ ಕನ್ನಿಕಾ ಹಾಗೂ 50ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಎರಡು ಮೊಬೈಲ್, ಗುಟ್ಕಾ ಪ್ಯಾಕೆಟ್ ಹಾಗೂ 2 ಕಬ್ಬಿಣದ ರಾಡ್ ಗಳನ್ನು ಪೋಲೀಸರು ಜಪ್ತಿ ಮಾಡಿದ್ದಾರೆ. ಈ ಕುರಿತು ಕಮಿಷನರ್ ಶರಣಪ್ಪ ಮಾತನಾಡಿದ್ದು, ದಾಳಿಯ ವೇಳೆ ಕೆಲವು ಮಹತ್ವದ ಸಾಕ್ಷಿಗಳು ಸಿಕ್ಕಿವೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತೇವೆ ಎಂದು ಕಲಬುರಗಿ ಪೊಲೀಸ್ ಕಮಿಷನರ್ ಡಾ. ಶರಣಪ್ಪ ತಿಳಿಸಿದ್ದಾರೆ.