ಬೆಂಗಳೂರು : ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ಬೆಂಗಳೂರಿನ ಆರ್.ಟಿ. ನಗರ ಪೊಲೀಸ್ ಠಾಣೆಗೆ ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ಅವರು ದೂರು ಸಲ್ಲಿಕೆ ಮಾಡಿದ್ದಾರೆ.ಕನ್ನಡಿಗರ ಭಾವನೆಗೆ ನಟ ಕಮಲ್ ಹಾಸನ್ ಧಕ್ಕೆ ತಂದಿದ್ದಾರೆ.ಆತನ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿದ್ದಾರೆ.
ಥಗ್ ಲೈಫ್ ಇವೆಂಟ್ ನಲ್ಲಿ ಭಾಗಿಯಾಗಿದ್ದಂತ ನಟ ಕಮಲ್ ಹಾಸನ್ ಅವರು, ನಟ ಶಿವರಾಜ್ ಕುಮಾರ್ ಎದುರೇ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಟ ಕಮಲ್ ಹಾಸನ್ ಅವರು ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬುದಾಗಿ ಹೇಳುವ ಮೂಲಕ ಈಗ ವಿವಾದ ಸೃಷ್ಠಿಸಿದ್ದಾರೆ. ಈ ಮೂಲಕ ಕನ್ನಡದ ಬಗ್ಗೆ ನಟ ಕಮಲ್ ಹಾಸನ್ ವಿವಾದಿತ ಹೇಳಿಕೆ ನೀಡಿದ್ದಾರೆ.