ಬೆಂಗಳೂರು : ಕಲಬುರಗಿ ಡಿಸಿ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಹಾಗೂ ಎನ್. ರವಿಕುಮಾರ್ ವಿರುದ್ಧ ದೂರು ದಾಖಲಾಗಿದೆ.
ಕಲಬುರಗಿ ಡಿಸಿ ವಿರುದ್ಧ ಎನ್ ರವಿಕುಮಾರ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಛಲವಾದಿ ನಾರಾಯಣಸ್ವಾಮಿ ಅವರು ಪ್ರಿಯಂಕ್ ಖರ್ಗೆ ವಿರುದ್ಧ ಆಕ್ಷೇಪರ್ಹ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಕಾಂಗ್ರೆಸ್ ನ ಪರಿಷತ್ ಸದಸ್ಯರು ಪ್ರತ್ಯೇಕ ದೂರು ನೀಡಿದ್ದಾರೆ.








