ಬೆಂಗಳೂರು: ಕನ್ನಡಿಗರ ಬಗ್ಗೆ ವಿವಾವದತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ವಿರುದ್ದ ದೂರು ದಾಖಲಾಗಿದೆ. ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕನ್ನಡ ಪರ ಹೋರಾಟಗಾರರು ದೂರು ದಾಖಲಿಸಿದ್ದು, ದೂರಿನಲ್ಲಿ ಸೋನು ನಿಗಮ್ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 352 (1), 351 (2) ಮತ್ತು 353 ರ ಅಡಿಯಲ್ಲಿ ದ್ವೇಷ, ಕ್ರಿಮಿನಲ್ ಮಾನಹಾನಿ ಮತ್ತು ಭಾಷಾ ಭಾವನೆಗಳನ್ನು ಕೆರಳಿಸಿದ್ದಕ್ಕಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸೋನು ನಿಗಮ್ ಅವರ ಹೇಳಿಕೆಗಳು ಕನ್ನಡಿಗ ಸಮುದಾಯಕ್ಕೆ ತೀವ್ರ ನೋವನ್ನುಂಟು ಮಾಡಿವೆ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.
ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಲ್ಲಿ ಏಪ್ರಿಲ್ 25 ಮತ್ತು 26 ರಂದು ನಡೆದ ಸಂಗೀತ ಕಾರ್ಯಕ್ರಮದಲ್ಲಿ ಸೋನು ನಿಗಮ್ ಗೆ ಸ್ಥಳದಲ್ಲಿದ್ದ ಯುವಕ ಕನ್ನಡದಲ್ಲಿ ಹಾಡಲು ಕೇಳಿದಾಗ ತಾಳ್ಮೆ ಕಳೆದುಕೊಂಡಿದ್ದ ಗಾಯಕ ಸೋನು ನಿಗಮ್ “ಇದಕ್ಕಾಗಿಯೇ ಪಹಲ್ಗಾಮ್ ದಾಳಿ ನಡೆಯಿತು – ಅಂತ ಹೇಳಿದ್ದರು, ಇದು ಈಗ ವಿವಾದಕ್ಕೆ ಕಾರಣವಾಗಿದೆ.
ಇದೇ ವೇಳೆ ನಾರಾಯಣ ಗೌಡ ಅವರು ಮಾತನಾಡಿದ್ದು, ಕನ್ನಡಿಗರನ್ನು ಭಯೋತ್ಪದಕರನ್ನು ಹೋಲಿಕೆ ಮಾಡಿರುವ ಸೋನು ನಿಗಮ್ ಅವರನ್ನು ಪಾಕ್ ಗೆ ಕಳುಹಿಸುವಂತೆ ಒತ್ತಾಯಿಸಿದ್ದಾರೆ. ಕನ್ನಡಿಗರ ಆತನನ್ನು ಬೆಳೆಸಿದ್ದು, ಕೂಡಲೇ ಆತ ಕನ್ನಡಿಗರ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ.