ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಬಾರ್ ಲೈಸೆನ್ಸ್ ಗಾಗಿ ಬಾರ್ ಮಾಲೀಕರ ಬಳಿ ಅಬಕಾರಿ ಡಿಸಿ ಜಗದೀಶ್ ನಾಯಕ್ 75 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಈ ವೇಳೆ 25 ಲಕ್ಷ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದಿದ್ದರು.
ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಬಕಾರಿ ಸಚಿವರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಲೋಕಾಯುಕ್ತಕ್ಕೆ ಲಕ್ಷ್ಮೀನಾರಾಯಣ ಎಂಬವರು ದೂರು ನೀಡಿದ್ದಾರೆ. ಬಾರ್ ಪರವಾನಿಗೆ ನೀಡಲು ಲಂಚ ಕೇಳಿದ ಆರೋಪ ಹಿನ್ನೆಲೆಯಲ್ಲಿ ಸಚಿವ ತಿಮ್ಮಾಪುರ ವಿರುದ್ಧ ಲಕ್ಷ್ಮಿನಾರಾಯಣ ದೂರು ನೀಡಿದ್ದಾರೆ.








