ಮೈಸೂರು : ಲೋಕಾಯುಕ್ತ ಅಧಿಕಾರಿಗಳ ಮೇಲೆ ಲಕ್ಷ್ಮಣ್ ಒತ್ತಡ ಹಾಕಿತ್ತಿರುವುದಾಗಿ ಸ್ನೇಹಮಯಿ ಕೃಷ್ಣ ಪದೇ ಪದೇ ಆರೋಪ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ಆರಂಭಿಸಿದ್ದಾರೆ. ಅಲ್ಲದೆ ಇಡಿ ಅವರಿಗೂ ಕೂಡ ಸ್ನೇಹಮಯಿ ಕೃಷ್ಣ ದೂರು ನೀಡಿದ್ದು, ಇಡಿ ಅಧಿಕಾರಿಗಳು ಸಹ ತನಿಖೆ ನಡೆಸುತ್ತಿದ್ದಾರೆ.
ಇದರ ಮಧ್ಯ ಲೋಕಾಯುಕ್ತ ಅಧಿಕಾರಿಗಳ ಮೇಲೆ ಲಕ್ಷ್ಮಣ್ ಒತ್ತಡ ಹಾಕಿತ್ತಿರುವುದಾಗಿ ಸ್ನೇಹಮಯಿ ಕೃಷ್ಣ ಪದೇ ಪದೇ ಆರೋಪ ಮಾಡುತ್ತಿದ್ದಾರೆ. ನನಗೂ ಲೋಕಾಯುಕ್ತ ಅಧಿಕಾರಿಗಳಿಗೂ ಯಾವುದೇ ಸಂಬಂಧವಿಲ್ಲ. ಆದಾಗ್ಯೂ ಅನಗತ್ಯ ಆರೋಪ ಮಾಡುತ್ತಿದ್ದಾರೆ. ಹಾಗೆ ನೋಡಿದರೆ ಸ್ನೇಹಮಯಿ ಕೃಷ್ಣ ಅವರ ವಿರುದ್ಧವೇ ಅನೇಕ ಪ್ರಕರಣಗಳು ಇವೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಲೋಕಾಯುಕ್ಕೆ ದೂರು ನೀಡಿದ್ದಾಗಿ ಎಂ.ಲಕ್ಷ್ಮಣ್ ತಿಳಿಸಿದ್ದಾರೆ.