ವಿಜಯನಗರ : ನರೇಗಾ ಡೇ ಎಂಬ ಹೆಸರಿನಲ್ಲಿ ತಾಲೂಕು ಪಂಚಾಯಿತಿ ಅಧಿಕಾರಿಗಳು, ಪಿಡಿಒಗಳು ಸೇರಿದಂತೆ ಮಹಿಳಾ ಅಧಿಕಾರಿಗಳು ಕುಣಿದು ಕುಪ್ಪಳಿಸಿ ಮೋಜು ಮಸ್ತಿ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಇದೀಗ ಅಧಿಕಾರಿಗಳು ಭರ್ಜರಿ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದ್ದು, ಈ ಕುರಿತು ಡಿಸಿಗೆ ದೂರು ಸಲ್ಲಿಕೆಯಾಗಿದೆ.
ಹೌದು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಅಧಿಕಾರಿಗಳು ಮಸ್ತ್ ಡಾನ್ಸ್ ಮಾಡಿದ್ದಾರೆ. ತಾಲೂಕು ಪಂಚಾಯತಿ ಅಧಿಕಾರಿ ಹಾಗೂ ಪಿಡಿಒಗಳಿಂದ ಭರ್ಜರಿ ಡ್ಯಾನ್ಸ್ ಮಾಡಲಾಗಿದೆ. ನರೇಗಾ ಡೇ ದಿನದಂದು ಅಧಿಕಾರಿಗಳು ಎಂಜಾಯ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಅಧಿಕಾರಿ ಜೊತೆಗೆ ಮಹಿಳಾ ಸಿಬ್ಬಂದಿಗಳು ಕೂಡ ಭರ್ಜರಿ ಟೈಪ್ಸ್ ಹಾಕಿದ್ದಾರೆ. ಅಧಿಕಾರಿಗಳ ಡ್ಯಾನ್ಸ್ಗೆ ಸಿಬ್ಬಂದಿಗಳು ಶಿಳ್ಳೆ ಮತ್ತು ಚಪ್ಪಾಳೆ ಹೊಡೆದಿದ್ದು, ಅಧಿಕಾರಿಗಳ ಡ್ಯಾನ್ಸ್ ವಿಡಿಯೋ ವೈರಲ್ ಆಗಿದೆ. ಈ ಕುರಿತು ವಿಜಯನಗರ ಜಿಲ್ಲಾಧಿಕಾರಿಗೆ ದೂರು ನೀಡಲಾಗಿದೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ತಾಲೂಕ್ ಪಂಚಾಯತಿ ಕಚೇರಿಯಲ್ಲಿ ಈ ಒಂದು ಘಟನೆ ನಡೆದಿದೆ.