ಬೆಂಗಳೂರು : ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಇದೀಗ ಲೋಕಸಭೆ ಚುನಾವಣೆಗೆ ಉಸ್ತುವಾರಿಗಳ ನೇಮಕ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಕಾಂಗ್ರೆಸ್ ಪಕ್ಷವು 14ಜಿಲ್ಲೆಗಳಿಗೆ ಒಬ್ಬರಂತೆ ಇಬ್ಬರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. 2ನೇ ಹಂತದಲ್ಲಿ ಚುನಾವಣೆ ನಡೆಯುವ ಜಿಲ್ಲೆಗಳ ಉಸ್ತುವಾರಿಯಾಗಿ ಜಿ.ಜಿ ಚಂದ್ರಶೇಖರ್ ನೇಮಕ ಮಾಡಲಾಗಿದ್ದು,3ನೇ ಹಂತದಲ್ಲಿ ಚುನಾವಣೆ ನಡೆಯುವ ಜಿಲ್ಲೆಗಳ ಉಸ್ತುವಾರಿಯಾಗಿ ಬಸವರಾಜ ರಾಯರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.