ಬೆಂಗಳೂರು : ಕಾಂಗ್ರೆಸ್ ನ ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ್ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಹಿರಿಯ ನಾಯಕರಾಗಿದ್ದ ಕಾಕಾಸಾಹೇಬ್ ಪಾಟೀಲ ಅವರ ನಿಧನ ದುಃಖವುಂಟುಮಾಡಿದೆ. ನೇರ ನಡೆ ನುಡಿ, ಜನಪರ ಕಾಳಜಿಯ ಮುತ್ಸದ್ದಿ ನಾಯಕನ ಅಗಲಿಕೆಯಿಂದ ರಾಜಕೀಯ ರಂಗ ಮಾತ್ರವಲ್ಲ, ಇಡೀ ಸಮಾಜ ಬಡವಾಗಿದೆ.
ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ.