ನವದೆಹಲಿ : ಕಾಂಗ್ರೆಸ್ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್ ಗಾಂಧಿ ಮಹತ್ವದ ಚರ್ಚೆ ನಡೆಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಲವು ತೋರಿಸಿದ್ದು, ಕೆಲವು ಸಚಿವರಿಗೆ ಕೊಕ್ ನೀಡುವ ಸಾಧ್ಯತೆಯಿಂದೆ ಎಂದು ಮೂಲಗಳು ತಿಳಿಸಿದೆ. ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಹೈಕಮಾಂಡ್ ಮಹತ್ವದ ಸಭೆ ನಡೆಸುತ್ತಿದೆ. ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಲವು ತೋರಿಸಿದ್ದು, ಕೆಲವು ಸಚಿವರಿಗೆ ಕೊಕ್ ನೀಡುವ ಸಾಧ್ಯತೆಯಿಂದೆ ಎಂದು ಮೂಲಗಳು ತಿಳಿಸಿದೆ.
ಬಿ.ಕೆ. ಹರಿಪ್ರಸಾದ್, ಆರ್.ವಿ. ದೇಶಪಾಂಡೆ ಸೇರಿದಂತೆ ಹಲವು ನಾಯಕರು ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ನವದೆಹಲಿಯ ಎಐಸಿಸಿ ಕಚೇರಿಯ ಇಂದಿರಾ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ.
ಈ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಘಟನೆ ಬಗ್ಗೆ ವಿವರಿಸಿದ್ದಾರೆ.
ಇನ್ನೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ದೆಹಲಿ ಭೇಟಿಯ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.