ಬೆಳಗಾವಿ : ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲವಾಗಿ ಮಾತನಾಡಿದ ಎಂಎಲ್ಸಿ ಸಿಟಿ ರವಿ ವಿರುದ್ಧ ಇದೀಗ ಸದನದ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ವೇಳೆ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಕಲಾಪವನ್ನು ಅನಿರ್ದಿಷ್ಟಾವಧಿ ವರೆಗೆ ಮುಂದೂಡಿದರು.
ಸಭಾಪತಿ ಬಸವರಾಜ್ ಹೊರಟ್ಟಿ ತೆರಳಿದ ಬಳಿಕವು ಕಲಾಪದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಪರಸ್ಪರ ವಾಗ್ವಾದ ನಡೆಯಿತು. ಈ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ನಿನಗೆ ತಾಯಿ ಇಲ್ಲವೇನೋ, ನಿನಗೆ ಮಗಳು ಇಲ್ವೇನೋ, ನಿನಗೆ ಹೆಂಡತಿ ಇಲ್ಲವೇನೋ ಎಂದು ಏಕವಚನದಲ್ಲಿ ಸಿಟಿ ರವಿ ವಿರುದ್ಧ ಆಕ್ರೋಶ ಹೊರ ಹಾಕಿದರು.
ಸಿಟಿ ರವಿ ನನಗೆ ತಾಯಿ ಇಲ್ವಾ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ ಕಾರಿದ್ದಾರೆ ಈ ವೇಳೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಸುತ್ತಲೂ ಮಾರ್ಷಲ್ ಗಳು ಸುತ್ತುವರೆದಿದ್ದಾರೆ. ಈ ಕುರಿತು ವಿಧಾನ ಪರಿಷತ್ ನಲ್ಲಿ ಬಸವರಾಜ ಹೊರಟ್ಟಿ ಪ್ರಸ್ತಾಪಿಸಿದ್ದು, ಸಿಟಿ ರವಿಗೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಆಡಿಯೋ ಮತ್ತು ವಿಡಿಯೋ ಕುರಿತು ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.