ಚಿತ್ರದುರ್ಗ : ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ವೀರೇಂದ್ರ ಪಪ್ಪಿ ಮನೆಯಲ್ಲಿ ಸುಮಾರು 12 ಕೋಟಿ ನಗದು ಹಣವನ್ನು ಇಡಿ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಸುಮಾರು 1 ಕೋಟಿ ವಿದೇಶಿ ಕರೆನ್ಸಿ ಸೇರಿದಂತೆ ಸುಮಾರು 12 ಕೋಟಿ ನಗದು ಪತ್ತೆಯಾಗಿದೆ.
ಶಾಸಕ ಕೆಸಿ ವೀರೇಂದ್ರ ಪಪ್ಪಿ ನಿವಾಸದ ಮೇಲೆ ದಾಳಿ ಮಾಡಿದಾಗ 6 ಕೋಟಿ ರೂಪಾಯಿ ಮೌಲ್ಯದ ಚಿನ್ನ, ಸುಮಾರು 10 ಕೆಜಿ ಬೆಳ್ಳಿ ನಾಲ್ಕು ವಾಹನ ಜಪ್ತಿ ಮಾಡಿದ್ದಾರೆ. ನಿನ್ನೆ ಸಿಕ್ಕಿಂನ ಗ್ಯಾಂಗ್ಟಾಕ್ ನಲ್ಲಿ ಶಾಸಕ ಕೆ ಸಿ ವೀರೇಂದ್ರ ಪಪ್ಪಿಯನ್ನು ಇಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಅಕ್ರಮ ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಅರೆಸ್ಟ್ ಮಾಡಲಾಗಿದೆ.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ನಿನ್ನೆ ಚಳ್ಳೆಕೆರೆ ಪಟ್ಟಣದಲ್ಲಿರುವ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು ಕೆ ಸಿ ವೀರೇಂದ್ರ ಹಾಗೂ ಸಹೋದರ ರಮೇಶ ಮನೆಗಳ ಮೇಲೆ ಇಡಿ ದಾಳಿ ನಡೆಸಿತ್ತು. ಕೆಸಿ ವೀರೇಂದ್ರಗೆ ಸೇರಿದ 17 ಬ್ಯಾಂಕ್ ಅಕೌಂಟ್ ಜಪ್ತಿ ಮಾಡಲಾಗಿದೆ.