ಉತ್ತರಕನ್ನಡ : ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಆಪ್ತ ಗೋಪಾಲಕೃಷ್ಣ ನಾಯ್ಕಗೆ ಚಾಕು ಇರಿದಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿ ಬಳಿ ನಡೆದಿದೆ. ಗೋಪಾಲಕೃಷ್ಣ ಕಾರಿನಲ್ಲಿ ಹೋಗುತ್ತಿರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡಸಿದ್ದಾರೆ.
ರಾಡ್ ನಿಂದ ಹೊಡೆದು ಚಾಕುವಿನಿಂದ ಇರಿದು ಪರಾರಿ ಆಗಿದ್ದಾರೆ. ಗೋವಾ ನೋಂದಣಿಯ ಫೋರ್ಡ್ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ, ತಲೆ ಕುತ್ತಿಗೆಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಅಂಕೋಲಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








